ಬೆಂಗಳೂರು: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ತೋಟಗಾರಿಕಾ ಇಲಾಖೆಯು ಲಾಲ್‌ಬಾಗ್‌ನಲ್ಲಿ 216ನೇ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ.ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜೀವನ ಗಾಥೆಯನ್ನ ಹೂಗಳಲ್ಲಿ ಅನಾವರಣಗೊಳಿಸಲಾಗಿದೆ. ಆಗಸ್ಟ್ 8 ರಿಂದ 19ರ ವರೆಗೆ ಈ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್‌ 8ರ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕು‌ಮಾರ್‌ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: Paris Olympics 2024 | ಅನರ್ಹಗೊಂಡ ಕೆಲವೇ ನಿಮಿಷಗಳಲ್ಲಿ ವಿನೇಶ್‌ ಆಸ್ಪತ್ರೆಗೆ ದಾಖಲುಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ 200 ಪ್ರಬೇಧದ ಸುಮಾರು 32 ಲಕ್ಷ ಹೂಗಳನ್ನ ಪ್ರದರ್ಶನಕ್ಕಿಡಲಾಗಿದೆ. ಹೊರ ರಾಜ್ಯದಿಂದ ಆಮದು ಮಾಡಿಕೊಳ್ಳಲಾದ ಗಿಡಗಳನ್ನು ಸಾರ್ವಜನಿಕರ‌ ಪ್ರದರ್ಶನಕ್ಕಿಡಲಾಗಿದೆ. ಪ್ರದರ್ಶನ ವೀಕ್ಷಣೆಗೆ ಬರುವವರಿಗೆ ಟಿಕೆಟ್ ವ್ಯವಸ್ಥೆ ಕೂಡ ಮಾಡಲಾಗಿದೆ. ವಯಸ್ಕರಿಗೆ 100 ರೂ. ಮಕ್ಕಳಿಗೆ 30 ರೂ. ನಿಗದಿಪಡಿಸಲಾಗಿದ್ದು, ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಜೊತೆಗೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಭಾರತ ಕಾಡಿದ ಆ ಮೂರು ದುರಂತಗಳು – ಬಲಿಯಾದ ಜೀವಗಳೆಷ್ಟು? ದುರಂತ ಆಗಿದ್ದು ಏಕೆ?ಗಾಜಿನ ಮನೆಯ ಕೇಂದ್ರ ಭಾಗದ ಹಿಂಭಾಗದಲ್ಲಿ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ ಬಿಂಬಿಸುವ ಮಹಾಡ್ ಸತ್ಯಾಗ್ರಹ, ಕಲಾರಾಮ್ ದೇವಸ್ಥಾನದ ಪ್ರವೇಶ, ಕೊರೆಂಗಾವ್ ವಿಜಯೋತ್ಸವದ ಕಲಾಕೃತಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಭಾರತದ ಭೂಪಟ ಮತ್ತು ಸಂವಿಧಾನ ಪೀಠಿಕೆ ಸೇರಿದಂತೆ ಇನ್ನೂ ಅನೇಕ ಕಲಾಕೃತಿಗಳು, ಸ್ತಬ್ಧ ಚಿತ್ರಗಳು ಪ್ರೇಕ್ಷಕರ ಗಮನ ಸೆಳೆಯಲಿವೆ. ಇದನ್ನೂ ಓದಿ: ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್: ವಿನೇಶ್‌ಗೆ ಸಮಾಧಾನ ಹೇಳಿದ ಮೋದಿ Sign in to your account
Username or Email Address


Password

 Remember Me


