ಧಾರವಾಡ: ರಾಜ್ಯ ಸರ್ಕಾರ 10 ಮುಸ್ಲಿಂ ಕಾಲೇಜುಗಳಿಗೆ ಪರವಾನಗಿ ಕೊಡಲು ಮುಂದಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಅವರಿಗೆ ಜೀವ ಬೆದರಿಕೆ ಸಂದೇಶವೊಂದು ಬಂದಿದೆ.ಅಪರಿಚಿತ ಮೊಬೈಲ್ ನಂಬರ್‌ನಿಂದ ವಾಟ್ಸಪ್ ವಾಯ್ಸ್ ಮೆಸೇಜ್‍ವೊಂದು ಬಂದಿದ್ದು, ಇದರಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಮೇಲೆ ಧಾರವಾಡದ (Dharwad) ಉಪನಗರ ಠಾಣೆಯಲ್ಲಿ ಮುತಾಲಿಕ್ ಅವರು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲುವಾಯ್ಸ್ ಮೆಸೆಜ್‍ನಲ್ಲಿ ಏನಿದೆ?: ಈ ಹಿಂದೆ ಮಸಿ ಬಳಿಸಿಕೊಂಡಿರುವೆ. ಇನ್ನೂ ಮೇಲಾದ್ರೂ ನಮ್ಮ ಸಮುದಾಯದ ಬಗ್ಗೆ ಮಾತನಾಡಬೇಡ. ನಮ್ಮ ಸಮುದಾಯದ ಬಗ್ಗೆ ಮಾತನಾಡೋಕೆ ನೀನು ಯಾರು ಎಂದು ಅಶ್ಲೀಲ ಪದಗಳನ್ನು ಬಳಕೆ ಮಾಡಿ ಮುತಾಲಿಕ್‍ಗೆ ಆ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ:  ರಾಜಕಾರಣದಿಂದ ಹಣ ಗಳಿಸಲು ಐಎಎಸ್ ಅಧಿಕಾರಿಗಳು, ರೌಡಿಗಳು ಬರ್ತಾ ಇದ್ದಾರೆ: ಸಂತೋಷ ಹೆಗ್ಡೆ
Sign in to your account
Username or Email Address


Password

 Remember Me


