ಚಾಮರಾಜನಗರ (Chamarajanagar): ಪೊಲೀಸರಿಂದ (Police) ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯೊಬ್ಬ ಪೊಲೀಸ್ ಜೀಪ್‌ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಮಾಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕುಂತೂರು ಮೋಳೆ ಗ್ರಾಮದ ನಿಂಗರಾಜು (24) ಮೃತ ಆರೋಪಿ. ಅಪ್ರಾಪ್ತೆಯ ಕಿಡ್ನ್ಯಾಪ್ ಕೇಸ್‌ನಲ್ಲಿ (Kidnap Case) ನಿಂಗರಾಜು ಆರೋಪಿಯಾಗಿದ್ದ. ವಿಚಾರಣೆಗೆಂದು ಪೊಲೀಸ್ ಠಾಣೆಗೆ (Police Station) ಕರೆತರುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಜೀಪ್‌ನಿಂದ ನೆಗೆದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಇದನ್ನೂ ಓದಿ: ಹಿಂದೂಗಳ ನಕಲಿ ಐಡಿ ಕಾರ್ಡ್ ಬಳಸಿಕೊಂಡು ವ್ಯಾಪಾರ ನಡೆಸಿದ ಅನ್ಯಕೋಮಿನ ವ್ಯಾಪಾರಸ್ಥರುಜೀಪ್‌ನಿಂದ ನೆಗೆದ ಬಳಿಕ ಗಂಭೀರ ಗಾಯಗಳಾಗಿದ್ದರಿಂದ ಯಳಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಕುಕ್ಕೆಯಲ್ಲಿ ಮೊದಲ ಬಾರಿಗೆ ವ್ಯಾಪಾರದಿಂದ ದೂರ ಉಳಿದ ಮುಸ್ಲಿಂ ವ್ಯಾಪಾರಿಗಳು- ಸಂಘರ್ಷವಿಲ್ಲದೆ ಜಾತ್ರೆ ಸಂಪನ್ನ
Sign in to your account
Username or Email Address


Password

 Remember Me


