ಶಿವಮೊಗ್ಗ: ಸಾಮಾಜಿಕ ಜಾಲತಾಣದ(Social Media) ಮೂಲಕ ಮಹಿಳೆಯನ್ನು ಪರಿಚಯ ಮಾಡಿಕೊಂಡು, ಆಕೆಯ ಅಶ್ಲೀಲ ವಿಡಿಯೋ ಪಡೆದು ಹಣಕ್ಕಾಗಿ ಬ್ಲ್ಯಾಕ್‌ಮೇಲ್(Black Mail) ಮಾಡುತ್ತಿದ್ದ ಆರೋಪಿಯನ್ನು ಜಿಲ್ಲೆಯ ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ.ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಮಹಿಳೆಯೊಬ್ಬರಿಗೆ Likely App ನಲ್ಲಿ ರೋಜರ್ ರಾಜಾ ಎಂಬ ಹೆಸರಿನ ವ್ಯಕ್ತಿಯೊಬ್ಬನು ಪರಿಚಯವಾಗಿದ್ದು, ನಂತರ ಇಬ್ಬರೂ ವಾಟ್ಸಪ್‌ ಮುಖಾಂತರ ವಿಡಿಯೋ ಮತ್ತು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.  ಇದನ್ನೂ ಓದಿ: ಮದ್ಯ ಸೇವಿಸಿದ್ದಕ್ಕೆ ಅವಮಾನ- ಮಗಳ ಮದುವೆಗೆ ಕೆಲವೇ ಗಂಟೆ ಬಾಕಿ ಇರುವಾಗಲೇ ತಂದೆ ಆತ್ಮಹತ್ಯೆಸಲುಗೆ ಬೆಳೆಸಿಕೊಂಡ ಯುವಕ ಮಹಿಳೆಯ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಸ್ಕ್ರೀನ್ ರೆಕಾರ್ಡ್ ಮೂಲಕ ಸಂಗ್ರಹಿಸಿಕೊಂಡು 1 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಹಣ ಕೊಡದಿದ್ದರೆ ಫೋಟೋ ಮತ್ತು ವಿಡಿಯೋಗಳನ್ನು ನಿಮ್ಮ ಮನೆಯವರಿಗೆ ಕಳಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಆತನ ಮಾನಸಿಕ ಹಿಂಸೆಗೆ ಬೆದರಿಹೋಗಿದ್ದ ಮಹಿಳೆ ಠಾಣೆಗೆ ಬಂದು ದೂರು ನೀಡಿದ್ದಾರೆ.ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಬಿಹಾರದ ಬೈಸಾ ಊರ್ಣಿಯ ಜಿಲ್ಲೆಯ ಚಕ್ಲ ಗ್ರಾಮದ ಆರೋಪಿ ರೋಜರ್ ರಾಜಾನನ್ನು (22) ಬಂಧಿಸಿದ್ದಾರೆ. ಅಲ್ಲದೇ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Sign in to your account
Username or Email Address


Password

 Remember Me


