ಚಿತ್ರರಂಗದಲ್ಲಿ ಬಯೋಪಿಕ್ (Biopic) ಸಿನಿಮಾಗಳ ಹಾವಳಿ ಜಾಸ್ತಿಯಾಗಿದೆ. ಕ್ರಿಕೆಟ್, ಸಿನಿಮಾ, ಉದ್ಯಮ ಹೀಗೆ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯನ್ನ ತೆರೆಯ ಮೇಲೆ ತೋರಿಸಲಾಗುತ್ತದೆ. ಇದೀಗ ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಯೋಪಿಕ್ ತೆರೆಗೆ ತರಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.ರಾಜಕೀಯ (Politics) ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನ ಬೆಳ್ಳಿಪರದೆಯಲ್ಲಿ ಬಿಚ್ಚಿಡಲು ಸತ್ಯರತ್ನಂ (Sathyaratanam)  ರೆಡಿಯಾಗಿದ್ದಾರೆ. ಇನ್ನೂ ವಿಶೇಷ ಅಂದ್ರೆ ಸಿದ್ದರಾಮಯ್ಯ ಅವರ ಪಾತ್ರಕ್ಕೆ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ(Vijay Sethupathi) ಬಣ್ಣ ಹಚ್ಚಲಿದ್ದಾರೆ ಎಂದು ಮೂಲಗಳ ಪ್ರಕಾರ ಮಾಹಿತಿ ಸಿಕ್ಕಿದೆ.ಕೊಪ್ಪಳದ ಮೂಲದ ನಿರ್ಮಾಪಕರಿಂದ ಚಿಂತನೆ ನಡೆಸಿದ್ದಾರೆ. ಈಗಾಗಲೇ ಈ ಕುರಿತು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಮಾಜಿ ಸಚಿವ ಶಿವರಾಜ್ ತಂಗಡಗಿ ಮತ್ತು ಜಮೀರ್ ಅಹ್ಮಮದ್ ನೇತೃತ್ವದಲ್ಲಿ ಮಾಕತೆ ನಡೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದನ್ನೂ ಓದಿ: ಬಿಕಿನಿ ತೊಟ್ಟು ಪೋಸ್‌ ಕೊಟ್ಟ ನಿವೇದಿತಾಗೆ ಬೆವರಿಳಿಸಿದ ನೆಟ್ಟಿಗರುಗಂಗಾವತಿ ಹಯಾತ್ ಪೀರ್ ಸಾಬ್ ಅವರ ನೇತೃತ್ವದ ಎಮ್‌ಎಸ್ ಕ್ರಿಯೇಷನ್ಸ್ ಬ್ಯಾನರ್ ಅಡಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಹೈ ಬಜೆಟ್‌ನಲ್ಲಿ 50 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಸದ್ಯದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್‌ ಬಗ್ಗೆ ಚಿತ್ರತಂಡದಿಂದ ಅಭಿಮಾನಿಗಳಿಗೆ ಅಧಿಕೃತ ಮಾಹಿತಿ ಸಿಗಲಿದೆ.
Sign in to your account
Username or Email Address


Password

 Remember Me


