ಬೆಳಗಾವಿ: ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ (Bribe)  ಬೇಡಿಕೆ ಇಟ್ಟಿದ್ದ ಕಿತ್ತೂರು ತಹಶೀಲ್ದಾರ್ (Tahsildar) ಮತ್ತು ಕೇಸ್ ವರ್ಕರ್ 2 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ (Lokayukta) ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು (Kittur) ತಹಶೀಲ್ದಾರ್ ಸೋಮಲಿಂಗಪ್ಪ ಹಲಗಿ ಹಾಗೂ ಕೇಸ್ ವರ್ಕರ್ ಪ್ರಸನ್ನ ಜಿ ಲೋಕಾಯುಕ್ತ ಬಲೆಗೆ ಬಿದ್ದವರು. ಕಿತ್ತೂರು ತಾಲೂಕಿನ ಖೊದಾನಪೂರ ಗ್ರಾಮದ ಬಾಪುಸಾಹೇಬ ಇನಾಮದಾರ ಎಂಬುವವರು ತಮ್ಮ 10 ಎಕರೆ ಜಮೀನಿನ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಿತ್ತೂರು ತಹಶೀಲ್ದಾರ್ 5 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಇದನ್ನೂ ಓದಿ: ಕುಕ್ಕೆಯ ಬಳಿಕ ಬೆಂಗಳೂರಿಗೆ ತಟ್ಟಿದ ಧರ್ಮ ದಂಗಲ್ಈ ಬಗ್ಗೆ ಬಾಪುಸಾಹೇಬ್ ಪುತ್ರ ರಾಜೇಂದ್ರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದರು. ದೂರು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು ಕಿತ್ತೂರು ತಹಶೀಲ್ದಾರ್ ಮನೆಯಲ್ಲಿಯೇ ಜಮೀನಿನ ಖಾತೆ ಬದಲಾವಣೆ ಮಾಡಲು 2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ  ದಾಳಿ ಮಾಡಿದ್ದಾರೆ. ಎರಡು ಲಕ್ಷ ಹಣ ಮತ್ತು ಶ್ಯೂರಿಟಿಗಾಗಿ 20 ಲಕ್ಷ ಮೌಲ್ಯದ ಖಾಲಿ ಚೆಕ್ ಅನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಬೆಳಗಾವಿ ಎಸ್‍ಪಿ ಯಶೋಧಾ ವಂಟಗೂಡಿ ಮಾರ್ಗದರ್ಶನದಲ್ಲಿ ತನಿಖಾಧಿಕಾರಿಯಾಗಿ ಅಪೂರ್ಣ ಹುಲಗೂರ ತಂಡದ ಸಿಬ್ಬಂದಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಈಗಲೂ ಮೋದಿ ನಂ.1 ಜನಪ್ರಿಯ ನಾಯಕ
Sign in to your account
Username or Email Address


Password

 Remember Me


