ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರದ ಗಡಿಭಾಗದಲ್ಲಿರುವ (Karnataka Maharashtra Border) ಕಿತವಾಡ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ನಾಲ್ವರು ಯುವತಿಯರು ಸಾವನ್ನಪ್ಪಿದ್ದಾರೆ.ಇಲ್ಲಿನ ಉಜ್ವಲ್ ನಗರ ಆಸೀಯಾ ಮುಜಾವರ್ (17), ಅನಗೋಳದ ಕುದ್‌ಶೀಯಾ ಹಾಸ್‌ಂ ಪಟೇಲ್(20), ಝಟ್‌ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ(20) ಹಾಗೂ ತಸ್ಮಿಯಾ(20) ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಶ್ರದ್ಧಾವಾಕರ್ ಹತ್ಯೆ ಪ್ರಕರಣ – ಪಾಲಿಗ್ರಾಫ್ ಪರೀಕ್ಷೆ ವೇಳೆ ಅಫ್ತಾಬ್‍ಗೆ ಕೇಳಿದ ಪ್ರಶ್ನೆಗಳೇನು?ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ (Kitwad Waterfalls) 40 ಯುವತಿಯರು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸೆಲ್ಫಿ ತಗೆದುಕೊಳ್ಳುವ ವೇಳೆ ಐವರು ಯುವತಿಯರು ಕಾಲು ಜಾರಿ ಬಿದ್ದಿದ್ದಾರೆ. ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಕಮಲ ಅರಳಿಸಲು ಪ್ಲಾನ್ – ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಬಿಜೆಪಿಗೆಗಾಯಗೊಂಡ ಯುವತಿಯನ್ನ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ (Belagavi Hospital) ದಾಖಲಿಸಲಾಗಿದೆ. ಉಳಿದ ನಾಲ್ವರು ಯುವತಿಯರ ಮೃತದೇಹವೂ ಆಸ್ಪತ್ರೆಯಲ್ಲೇ ಇದ್ದು, ಕುಟುಂಬಸ್ಥರು ಆಸ್ಪತ್ರೆ ಎದುರು ಜಮಾಯಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
Sign in to your account
Username or Email Address


Password

 Remember Me


