ಬೆಂಗಳೂರು: ಕರ್ನಾಟಕ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಧ್ಯಾನ (Meditation) ಮಾಡಿಸುವ ಮಹತ್ವದ ನಿರ್ಧಾರ ತೆಗೆದುಕೊಂಡು ಬೆನ್ನಲ್ಲೇ ದೇಶದಾದ್ಯಂತ ಧ್ಯಾನ ಮಾಡಿಸುವ ಮಹತ್ವದ ನಿರ್ಧಾರಕ್ಕೆ ಕೇಂದ್ರ ಸರ್ಕಾರ (Central Government) ಬಂದಿದೆ.ಇನ್ಮುಂದೆ ದೇಶದ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳು, ವಿದ್ಯಾಸಂಸ್ಥೆಗಳಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ಕದ್ರಿ ದೇಗುಲಕ್ಕೆ IRCಯಿಂದ ಬೆದರಿಕೆ ಪತ್ರ – ದೇಗುಲದ ಮಂಡಳಿಯಿಂದ ದೂರುಯುಜಿಸಿ ಕಾರ್ಯದರ್ಶಿ ಪ್ರೊ. ರಜನೀಶ್ ಜೈನ್‌ರಿಂದ ವಿಶ್ವವಿದ್ಯಾಲಯಗಳು, ಎಲ್ಲಾ ವಿದ್ಯಾಸಂಸ್ಥೆಗಳಿಗೆ ಪತ್ರ ಬರೆಯಲಾಗಿದೆ. 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ನೆನಪಿನಲ್ಲಿ ಈ ಮಹತ್ವದ ನಿರ್ಧಾರವನ್ನ ಕೇಂದ್ರ ಸರ್ಕಾರ ಮಾಡಿದೆ.ಧ್ಯಾನ ಮಾಡಿಸುವ ನಿಟ್ಟಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಜೊತೆ ಕೇಂದ್ರ ಸಂಸ್ಕೃತಿ‌ ಇಲಾಖೆ ಒಪ್ಪಂದ ಮಾಡಿಕೊಂಡಿದೆ. ಬೆಂಗಳೂರಿನ ಅರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಹರ್ ಘರ್ ಧ್ಯಾನ್ ಅಭಿಯಾನ ನಡೆಸಲು ನಿರ್ಧಾರ ಮಾಡಲಾಗಿದೆ. ಇದನ್ನೂ ಓದಿ: ಹಾಸನ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎ.ಎಚ್ ಲಕ್ಷ್ಮಣ್ ನೇಮಕಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಅಭಿವೃದ್ಧಿಪಡಿಸಿರೋ ಧ್ಯಾನದ ಮಾದರಿಗಳನ್ನು ಅಳವಡಿಸಿಕೊಳ್ಳಲು‌ ಯುಜಿಸಿ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಈ ಅಭಿಯಾನಕ್ಕೆ ಯಾವುದೇ ವಿಶ್ವವಿದ್ಯಾಲಯಗಳು, ಕಾಲೇಜುಗಳು ಶುಲ್ಕ ಭರಿಸುವಂತೆ ಇಲ್ಲ. ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಜೊತೆ ವಿಶ್ವವಿದ್ಯಾಲಯಗಳು, ಕಾಲೇಜುಗಳು ಸಂಪರ್ಕ ಇಟ್ಟುಕೊಂಡು ಅಭಿಯಾನ ನಡೆಸುವಂತೆ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.
Sign in to your account
Username or Email Address


Password

 Remember Me


