ರಾಯಚೂರು: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ಎರಡು ಪೋಕ್ಸೊ ಪ್ರಕರಣ (Pocso Case) ದಾಖಲಾಗಿದ್ದು ಇಬ್ಬರು ಕಾಮುಕರನ್ನು ಪೊಲೀಸರು (Police) ಬಂಧಿಸಿದ್ದಾರೆ.ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿಕ್ಷಕನೊಬ್ಬ 13 ವರ್ಷದ ವಿದ್ಯಾರ್ಥಿನಿಯೊಂದಿಗೆ (Student) ಮೂರು ದಿನ ನಾಪತ್ತೆಯಾಗಿದ್ದ. ಇದೀಗ ಅತಿಥಿ ಶಿಕ್ಷಕ ಪಾಲೇಶ್ (32) ಸಿರವಾರ ಪೊಲೀಸರ ಅತಿಥಿಯಾಗಿದ್ದಾನೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಬೆಲ್ಟ್, ದೊಣ್ಣೆಯಿಂದ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ – ಶಾಲಾ ನಿರ್ದೇಶಕ ವಿರುದ್ಧ ದೂರುಇನ್ನೂ ದೇವದುರ್ಗ ತಾಲೂಕಿನಲ್ಲಿ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅಯ್ಯಪ್ಪ (45) ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮಗುವನ್ನು ಮನೆಗೆ ಬಿಡುವ ನೆಪದಲ್ಲಿ ಕರೆದೊಯ್ದ ಕಾಮುಕ ಅತ್ಯಾಚಾರಕ್ಕೆ ಯತ್ನಿಸಿದ್ದ, ಮಗು ಕೂಗಾಡಿ ಗಲಾಟೆ ಮಾಡಿದಾಗ ಯಾರಿಗೂ ಹೇಳದಂತೆ ಕೊಲೆ ಬೆದರಿಕೆ ಹಾಕಿದ್ದ. ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದ ಜಾಲಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಸಿನಿಮಾಗಳ ಆಯ್ಕೆ, ದೇವರು ಬಗೆಗಿನ ಗ್ರಹಿಕೆ ಬಗ್ಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆಎರಡೂ ಪ್ರಕರಣಗಳ ಆರೋಪಿಗಳು ಸೆರೆಸಿಕ್ಕಿದ್ದು, ಬಾಲಕಿಯರ ರಕ್ಷಣೆ ಮಾಡಲಾಗಿದೆ. ಸಿರವಾರ ಹಾಗೂ ಜಾಲಹಳ್ಳಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
Sign in to your account
Username or Email Address


Password

 Remember Me


