ಉಡುಪಿ: ಧಾರ್ಮಿಕ ಸಮಾರಂಭಕ್ಕೆ ಆಗಮಿಸಿದ್ದ ಯುವತಿ (Young Woman) ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ (Udupi) ನಡೆದಿದೆ. ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಕುಸಿದು ಬಿದ್ದಿದ್ದಾರೆ.ಜೋಸ್ನಾ ಬ್ರಹ್ಮಾವರ ತಾಲೂಕು, ಕೊಳಲಗಿರಿಯ ಸಮೀಪದ ಹಾವಂಜೆಯ ತನ್ನ ಸಂಬಂಧಿಕರ ಮನೆಗೆ ಬಂದಿದ್ದರು. ರಾತ್ರಿ ಸುಮಾರು 8:30ಕ್ಕೆ ಯುವತಿ ಕುಳಿತಲ್ಲೇ ಕುಸಿದುಬಿದ್ದಿದ್ದಾರೆ. ತಕ್ಷಣ ಯುವತಿಯನ್ನು ಆಕೆಯ ಸಂಬಂಧಿಕರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಜೋಸ್ನಾ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ದೊಡ್ಡರಸಿನಕೆರೆಯಲ್ಲಿ ಅಂಬರೀಶ್ 4ನೇ ವರ್ಷದ ಸ್ಮರಣೆ – ಸಮಾಧಿಗೆ ಪೂಜೆ ಸಲ್ಲಿಸಿದ ಸಂಸದೆ ಸುಮಲತಾಘಟನೆಯ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ್ಯೋಸ್ನಾಗೆ ಯಾವುದೇ ಅನಾರೋಗ್ಯದ ಸಮಸ್ಯೆ ಇರಲಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅದರಲ್ಲೂ ಕೊರೊನಾ ನಂತರ ಆರೋಗ್ಯವಂತರೂ ದಿಢೀರ್ ಎಂದು ಕುಸಿದು ಬಿದ್ದು ಮೃತಪಡುತ್ತಿರುವ ಘಟನೆಗಳು ದೇಶಾದ್ಯಂತ ದಾಖಲಾಗುತ್ತಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ. ಇದನ್ನೂ ಓದಿ: ಶಾರೀಕ್ ಅಲ್ಲ ಘಜನಿಯಿಂದ ಟಿಪ್ಪುವರೆಗಿನ ಎಲ್ಲರೂ ದೇವಸ್ಥಾನದ ಮೇಲೆ ದಾಳಿ ಮಾಡ್ಕೊಂಡೇ ಬಂದಿದ್ದಾರೆ: ಮುತಾಲಿಕ್
Sign in to your account
Username or Email Address


Password

 Remember Me


