ಬೆಂಗಳೂರಿನಲ್ಲಿಂದು ಮೋಡ ಕವಿದ ವಾತವರಣದ ಜೊತೆಗೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಇನ್ನೂ ಎರಡು ದಿನ ಚಳಿಯ ವಾತಾವರಣ ಇರಲಿದೆ.ನಗರದೆಲ್ಲೆಡೆ ಬೆಳಗ್ಗಿನಜಾವ ದಟ್ಟ ಮಂಜು ಆವರಿಸಲಿದೆ. ಇಂದು ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣದಿಂದಾಗಿ ನವೆಂಬರ್ 24ರಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಮಡಿಕೇರಿ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದೆ.ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 26-19
ಮಂಗಳೂರು: 31-24
ಶಿವಮೊಗ್ಗ: 29-21
ಬೆಳಗಾವಿ: 31-20
ಮೈಸೂರು: 28-19
ಮಂಡ್ಯ: 28-20ಮಡಿಕೇರಿ: 23-16
ರಾಮನಗರ: 23-12
ಹಾಸನ: 26-18
ಚಾಮರಾಜನಗರ: 28-19
ಚಿಕ್ಕಬಳ್ಳಾಪುರ: 26-18
ಕೋಲಾರ: 26-19ತುಮಕೂರು: 28-19
ಉಡುಪಿ: 31-24
ಕಾರವಾರ: 32-26
ಚಿಕ್ಕಮಗಳೂರು: 26-18
ದಾವಣಗೆರೆ: 30-21ಹುಬ್ಬಳ್ಳಿ: 31-21
ಚಿತ್ರದುರ್ಗ: 28-20
ಹಾವೇರಿ: 31-21
ಬಳ್ಳಾರಿ: 31-22
ಗದಗ: 31-21
ಕೊಪ್ಪಳ: 31-21ರಾಯಚೂರು: 32-22
ಯಾದಗಿರಿ: 32-21
ವಿಜಯಪುರ: 32-21
ಬೀದರ್: 30-19
ಕಲಬುರಗಿ: 32-21
ಬಾಗಲಕೋಟೆ: 32-22
Sign in to your account
Username or Email Address


Password

 Remember Me


