ಬೆಂಗಳೂರು: ಸಿಲಿಕಾನ್ ಸಿಟಿಯ ವೆದರ್ (Bengaluru Weather) ಸದ್ಯ ಊಟಿಯಂತಾಗಿದೆ. ಬೆಂಗಳೂರು ವಾತಾವರಣ ಕೂಲ್- ಕೂಲ್ ಆಗಿದ್ದು, ಬೆಳಗೆದ್ದು ಕೆಲಸಕ್ಕೆ ತೆರಳುವ ಮಂದಿಗೆ ಕೊಂಚ ಕಿರಿಕಿರಿ ಉಂಟು ಮಾಡುತ್ತಿದೆ.ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆ (Rain) ಯ ಸಿಂಚನವಾಗಿದೆ. ಹೀಗಾಗಿ ವಾಹನ ಸವಾರರಿಗೂ ತೊಂದರೆ ಆಗಿದೆ. ಸದ್ಯ ಮೋಡ ಕವಿದ ವಾತಾವರಣವಿದ್ದು, ನಗರದ ಹಲವಡೆ ಮಂಜು ಮುಸುಕಿದೆ. ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಚಹಾದೊಂದಿಗೆ ಮಾಡಿ ಸವಿಯಿರಿ ರುಚಿರುಚಿಯಾದ ಗೆಣಸಿನ ಕಟ್ಲೆಟ್ನಗರದಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಷಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಕಾಲ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Sign in to your account
Username or Email Address


Password

 Remember Me


