ಕಿರುತೆರೆಯ ಅಗ್ನಿಸಾಕ್ಷಿ (Agnisakshi), ಬಿಗ್ ಬಾಸ್ ಹೀಗೆ ಸಾಕಷ್ಟು ಸೀರಿಯಲ್ ಮೂಲಕ ಶೋ ಮೂಲಕ ಮನೆಮಾತಾದ ವೈಷ್ಣವಿ ಅವರಿಗೆ ನಿಶ್ಚಿತಾರ್ಥ ಆಗಿದೆ ಎಂಬ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ನಿಶ್ಚಿತಾರ್ಥದ ಸುದ್ದಿ ನಿಜಾನಾ ಎಂಬುದರ ಬಗ್ಗೆ ನಟಿ ವೈಷ್ಣವಿ ಪಬ್ಲಿಕ್ ಟಿವಿ ಡಿಜಿಟಲ್‌ಗೆ ಸ್ಪಷ್ಟನೆ ನೀಡಿದ್ದಾರೆ.ಬಿಗ್ ಬಾಸ್ (Bigg Boss) ನಂತರ ಕಿರುತೆರೆಯಿಂದ ದೂರ ಉಳಿದಿದ್ದ ನಟಿ ಮತ್ತೆ ಹೊಸ ಧಾರಾವಾಹಿ ಮೂಲಕ ವೈಷ್ಣವಿ ಕಂಬ್ಯಾಕ್ ಆಗಿದ್ದಾರೆ. ಈ ಮಧ್ಯೆ ನಟಿಯ ಎಂಗೇಜ್‌ಮೆಂಟ್ ವಿಚಾರ ಎಲ್ಲೆಡೆ ಸದ್ದು ಮಾಡುತ್ತಿದೆ. ಈ ಕುರಿತು ನಟಿ ವೈಷ್ಣವಿ ಮೌನ ಮುರಿದಿದ್ದಾರೆ. ಇದು ಪಕ್ಕಾ ಅರೇಂಜ್ಡ್ ಮ್ಯಾರೇಜ್ ಹುಡುಗನ ಕಡೆಯವರು ಬಂದು ನೋಡಿ, ಮಾತುಕತೆ ಮಾಡಿರೋದು ನಿಜಾ ಆದರೆ ಇದು ಎಂಗೇಜ್‌ಮೆಂಟ್ ಅಲ್ಲ, ನಾನಿನ್ನೂ ಒಪ್ಪಿಕೊಂಡಿಲ್ಲ ಎಂದಿದ್ದಾರೆ. ಇದನ್ನೂ ಓದಿ:‘ಡವ್ ಮಾಸ್ಟರ್’ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯಮನೆಯವರು ನಿರ್ಧರಿಸಿರೋದರಿಂದ ಹುಡುಗ ಕೂಡ ನನಗೆ ಹೊಸ ವ್ಯಕ್ತಿ ಆಗಿರೋದ್ರಿಂದ ನನಗೂ ಕೊಂಚ ಸಮಯಾವಕಾಶ ಬೇಕಾಗಿದೆ. ನಾನಿನ್ನೂ ಈ ಮದುವೆಗೆ ಒಪ್ಪಿಗೆ ಸೂಚಿಸಿಲ್ಲ ಎಂದು ನಟಿ ಪಬ್ಲಿಕ್ ಟಿವಿ ಡಿಜಿಟಲ್‌ಗೆ ಸ್ಪಷ್ಟನೆ ನೀಡಿದ್ದಾರೆ.ಇನ್ನೂ ಹುಡುಗನ ಹೆಸರು ವಿಧ್ಯಾಭರಣ, ಬೆಂಗಳೂರಿನ ಮೂಲದ ಬ್ಯುಸಿನೆಸ್‌ಮ್ಯಾನ್ ಆಗಿದ್ದಾರೆ. 2018ರಲ್ಲಿ `ವಿರಾಜ್’ ಎಂಬ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದಾರೆ. ಮುಂದಿನ ದಿನಗಳಲ್ಲಿ ನಟಿ ಒಪ್ಪಿ ಮುಂದುವರಿದರೆ, ಚಂದನವನದಲ್ಲಿ ಮತ್ತೊಂದು ಜೋಡಿಯ ಮದುವೆಯನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳಬಹುದು.ಶೃತಿ ರಿಪ್ಪನ್‌ಪೇಟೆ, ಪಬ್ಲಿಕ್‌ ಟಿವಿ ಡಿಜಿಟಲ್‌
Sign in to your account
Username or Email Address


Password

 Remember Me


