ಸ್ಯಾಂಡಲ್‌ವುಡ್ ನಟಿ ರಾಗಿಣಿ (Ragini Dwivedi) ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಶೂಟಿಂಗ್ ವೇಳೆ ಎಡಗೈಗೆ ಪೆಟ್ಟು ಮಾಡಿಕೊಂಡಿದ್ದ ನಟಿ ಆರೋಗ್ಯದಲ್ಲಿ ಚೇತರಿಕೆ ಕಂಡ ಬೆನ್ನಲ್ಲೇ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ (Kapil Dev) ಅವರನ್ನು ಭೇಟಿಯಾಗಿದ್ದಾರೆ.ಸಾಕಷ್ಟು ಸಂಕಷ್ಟಗಳನ್ನ ಎದುರಿಸಿದ ನಂತರ ಸಾಲು ಸಾಲು ಸಿನಿಮಾಗಳಲ್ಲಿ ರಾಗಿಣಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಕಮಾಂಡೋ ಚಿತ್ರೀಕರಣದ ವೇಳೆ ಎಡಗೈಗೆ ಪೆಟ್ಟು ಮಾಡಿಕೊಂಡಿದ್ದರು. ಅದಕ್ಕೆ ಚಿಕಿತ್ಸೆ ಕೂಡ ಪಡೆದು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಇದೀಗ ನಟಿ ಮುಂಬೈನತ್ತ ಮುಖ ಮಾಡಿದ್ದಾರೆ. ಪೆಟ್ಟು ಮಾಡಿಕೊಂಡಿದ್ದ ಕೈಗೆ ಫಿಜಿಯೋ ಥೆರಪಿ ಕೂಡ ಮಾಡಿಸಿಕೊಂಡಿದ್ದಾರೆ. ಸದ್ಯ ಮುಂಬೈನಲ್ಲಿ ಬೀಡು ಬಿಟ್ಟಿರುವ ರಾಗಿಣಿ ಕಪಿಲ್ ಅವರನ್ನ ಭೇಟಿಯಾಗಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ರೀತಿಯಲ್ಲಿಯೇ ಕೈ ಸನ್ನೆ ಮಾಡಿ ರಿಷಬ್ ತಿರುಗೇಟುಕ್ರಿಕೆಟ್ ಲೋಕದ ಮಹಾನ್ ದಿಗ್ಗಜ ಕಪಿಲ್ ದೇವ್ ಅವರನ್ನ ಮುಂಬೈನಲ್ಲಿ ಅನಿರೀಕ್ಷಿತವಾಗಿ ಭೇಟಿಯಾಗಿ ತಮ್ಮ ಪರಿಚಯ ಮಾಡಿಕೊಂಡಿದ್ದಾರೆ. ಅವರ ಜೊತೆಗೆ ಸಾಕಷ್ಟು ಸಮಯ ಮಾತನಾಡಿದ್ದಾರೆ. ಎಲ್ಲ ಫ್ಯಾನ್ಸ್ ರೀತಿಯಲ್ಲಿಯೇ ಕಪಿಲ್ ದೇವ್ ಜೊತೆ ರಾಗಿಣಿ ಫೋಟೋ ಕ್ಲಿಕಿಸಿಕೊಂಡಿದ್ದಾರೆ. ನೆಚ್ಚಿನ ಕ್ರಿಕೆಟ್ ಆಟಗಾರನ ಜೊತೆ ಫೋಟೋ ತೆಗೆಸಿಕೊಂಡಿದ್ದಕ್ಕೆ ರಾಗಿಣಿ ಸಂಭ್ರಮದಿಂದ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Sign in to your account
Username or Email Address


Password

 Remember Me


