ಬೆಳಗಾವಿ: ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲೇ ವಿದ್ಯಾರ್ಥಿಯೊಬ್ಬ (Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಹೊಂಗಲ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಬೇರೆ ವಿದ್ಯಾರ್ಥಿಗಳು ಕಾಲೇಜಿಗೆ (College) ಹೋದ ಬಳಿಕ ಈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ವಿದ್ಯಾರ್ಥಿ ಬಾಗಿಲು ತೆರೆಯದ ಕಾರಣ ಇತರ ವಿದ್ಯಾರ್ಥಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಸ್ಸಾಂ, ಮೇಘಾಲಯ ಗಡಿಯಲ್ಲಿ ಮರ ಕಳ್ಳಸಾಗಣೆ – ಘರ್ಷಣೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿ 6 ಸಾವುಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಪ್ರಾಪ್ತ ಬಾಲಕಿಯ ರೇಪ್ – ಮುಸ್ಲಿಂ ಧರ್ಮಕ್ಕೆ ಮತಾಂತರವಾದ್ರೆ ಮದುವೆ ಆಗ್ತೇನೆ ಎಂದ ಕೀಚಕ
Sign in to your account
Username or Email Address


Password

 Remember Me


