ಬಳ್ಳಾರಿ: ಮುಡಾ ಹಗರಣದ (MUDA Scam) ಆರೋಪ ಹಾಗೂ ಬಿಜೆಪಿ- ಜೆಡಿಎಸ್‌ ಪಾದಯಾತ್ರೆಯಿಂದ (BJP-JDS Padayatra) ಸಿಎಂ ಸಿದ್ದರಾಮಯ್ಯ ವಿಚಲಿತರಾದ್ರಾ? ಹೀಗೊಂದು ಪ್ರಶ್ನೆ ಈಗ ಎದ್ದಿದೆ.ನಿಗದಿಯಾಗಿದ್ದ ವಿಜಯನಗರ ಜಿಲ್ಲಾ ಪ್ರವಾಸವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ದಿಢೀರ್ ರದ್ದು ಮಾಡಿದ್ದರಿಂದ ಈ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ತಮಿಳುನಾಡಿಗೂ ಕಾವೇರಿ ಹರಿದರೂ ರೈತರಿಗೆ ತಪ್ಪದ ಕಂಟಕ!ಮಂಗಳವಾರ ಕೊಪ್ಪಳ (Koppala) ಹಾಗೂ ವಿಜಯನಗರದಲ್ಲಿ (Vijayanagara) ಸಿದ್ದರಾಮಯ್ಯ ಪ್ರವಾಸ ನಿಗದಿಯಾಗಿತ್ತು. ಭರ್ಜರಿ ಮಳೆಯಿಂದ ಭರ್ತಿಯಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಸಿಎಂ ಬಾಗಿನ ಅರ್ಪಿಸಬೇಕಿತ್ತು.ಈ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಚೇರಿ ದೃಢಪಡಿಸಿತ್ತು. ಆದರೆ ಮುಖ್ಯಮಂತ್ರಿಗಳು ಬರುವುದಕ್ಕೆ ಒಂದು ದಿನಕ್ಕೆ ಮೊದಲೇ ಕಾರ್ಯಕ್ರಮ ಮುಂದೂಡಿಕೆಯಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ – ಎನ್‌ಐಎಯಿಂದ ಸ್ಪಾಟ್‌ ಮಹಜರುತಾತ್ಕಾಲಿಕವಾಗಿ ಸಿಎಂ ಕಾರ್ಯಕ್ರಮ ಮುಂದೂಡಿಕೆಯಾದ ಬಗ್ಗೆ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. Sign in to your account
Username or Email Address


Password

 Remember Me


