ಬೆಳಗಾವಿ: ಮಳೆಯಿಂದ (Rain) ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ (Compensation) ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.ಬೆಳಗಾವಿಯಲ್ಲಿ (Belagavi) ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಬಿಜೆಪಿ ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ.ಈ ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ಹಣ ದುರುಪಯೋಗವಾಯಿತು. ಹಲವರಿಗೆ ಮೊದಲ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಇನ್ನೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.ಜನರ ಸಹಕಾರವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು. ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳು ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್ ಕಂಬ, ಟ್ರಾನ್ಸ್‍ಫಾರ್ಮರ್‌ಗಳ ದುರಸ್ತಿ ಮೊದಲಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.ಮಳೆಗೆ ಕಟ್ಟೆಚ್ಚರ ವಹಿಸಲು ಸೂಚನೆ:
ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ. ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.ಗೃಹಲಕ್ಷ್ಮಿ ಮೂರು ತಿಂಗಳಿನಿಂದ ಬಾಕಿ ಇದೆ ಎಂಬ ಪತ್ರಕರ್ತರ ಪ್ರಶ್ನೆಗೆ ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.Sign in to your account
Username or Email Address


Password

 Remember Me


