ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮತ್ತೆ 22 ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ,ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು , ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.ಈಗಾಗಲೇ ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗುವ ಬಗ್ಗೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಬೆಂಗಳೂರಿನಲ್ಲಿ ಇಳಿಕೆ ಕಂಡಿದ್ದ ಕನಿಷ್ಠ ತಾಪಮಾನ ಮುಂದಿನ 24 ಗಂಟೆಗಳಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಈ ಮಧ್ಯೆ ಇದೀಗ ಹವಾಮಾನ ಇಲಾಖೆ ಮತ್ತೆ ಮಳೆಯ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಡುಪಿಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.ನಗರಗಳ ಹವಾಮಾನ ವರದಿ:
ಬೆಂಗಳೂರು: 23-18
ಮಂಗಳೂರು: 31-24
ಶಿವಮೊಗ್ಗ: 27-20
ಬೆಳಗಾವಿ: 28-19
ಮೈಸೂರು: 27-19
ಮಂಡ್ಯ: 27-20ಮಡಿಕೇರಿ: 24-16
ರಾಮನಗರ: 26-19
ಹಾಸನ: 25-18
ಚಾಮರಾಜನಗರ: 27-19
ಚಿಕ್ಕಬಳ್ಳಾಪುರ: 21-17
ಕೋಲಾರ: 23-19ತುಮಕೂರು: 24-19
ಉಡುಪಿ: 32-24
ಕಾರವಾರ: 31-24
ಚಿಕ್ಕಮಗಳೂರು: 25-18
ದಾವಣಗೆರೆ: 27-20ಹುಬ್ಬಳ್ಳಿ: 29-21
ಚಿತ್ರದುರ್ಗ: 26-19
ಹಾವೇರಿ: 29-21
ಬಳ್ಳಾರಿ: 28-21
ಗದಗ: 28-21
ಕೊಪ್ಪಳ: 29-21ರಾಯಚೂರು: 29-22
ಯಾದಗಿರಿ: 30-22
ವಿಜಯಪುರ: 30-20
ಬೀದರ್: 28-18
ಕಲಬುರಗಿ: 30-21
ಬಾಗಲಕೋಟೆ: 31-21
Sign in to your account
Username or Email Address


Password

 Remember Me


