ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ಲವ್ ಜಿಹಾದ್ (Love Jihad) ಆರೋಪದ ಸುದ್ದಿ ಸದ್ದು ಮಾಡಿದ್ದು ಇದು ಲವ್ ಜಿಹಾದ್‍ನ ವ್ಯವಸ್ಥಿತಿ ಪಿತೂರಿ ಎಂದು ಯುವತಿ ಸಹೋದರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.ಜಿಲ್ಲೆಯ ಕೊಪ್ಪ (Koppa) ತಾಲೂಕಿನ ಹರಿಹರಪುರ ಸಮೀಪದ ಶಾನುವಳ್ಳಿ ಗ್ರಾಮದ ಸಂಗೀತಾ (ಹೆಸರು ಬದಲಿಸಲಾಗಿದೆ) ಎಂಬ ಯುವತಿಯೊಂದಿಗೆ ಫೋಟೋಗಳನ್ನು ಕೊಪ್ಪ ಪಟ್ಟಣದ ಮೊಹಮದ್ ರೌಫ್ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು. ಈ ಬಗ್ಗೆ ಯುವತಿ ಸಹೋದರ 20 ದಿನದ ಹಿಂದೆಯೇ ಹರಿಹರಪುರ ಠಾಣೆಗೆ ದೂರು ದಾಖಲಿಸಿದ್ದನು. ಹರಿಹರಪುರ ಪೊಲೀಸರು (Police) ಇದು ಸೈಬರ್ ಪ್ರಕರಣ ಚಿಕ್ಕಮಗಳೂರಿನ ಸಿಇಎನ್‌ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದರು. ಅದರಂತೆ ಯುವತಿ ಸಹೋದರ ಜಿಲ್ಲಾ ಕೇಂದ್ರ ಸಿಇಎನ್‌ ಠಾಣೆಗೆ ಬಂದು ದೂರು ನೀಡಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ. ಸಿಇಎನ್‌ ಠಾಣೆಯ ಇನ್ಸ್‌ಪೆಕ್ಟರ್‌ (Inspector) ನಾಸಿರ್ ಹುಸೇನ್ ನಾಮಕಾವಸ್ತೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮದುವೆಗೆ ಯೋಧರನ್ನು ಆಹ್ವಾನಿಸಿದ ಜೋಡಿ – ಕರೆಯೋಲೆ ಕಂಡು ಖುಷಿ ಪಟ್ಟ ಇಂಡಿಯನ್ ಆರ್ಮಿಸಿಇಎನ್‌ ವಿಭಾಗದ ಪೊಲೀಸರಿಗೂ ಸಹ ಎಲ್ಲಾ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸಲಾಗಿತ್ತು. ಆದರೆ, ಈವರೆಗೂ ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದ್ದಾರೆ. ಸಿಇಎನ್‌ ಠಾಣೆ ಇನ್ಸ್‌ಪೆಕ್ಟರ್‌ ನಾಸಿರ್ ಹುಸೇನ್ ನೆಪ ಮಾತ್ರಕ್ಕೆ ಭರವಸೆ ನೀಡಿದ್ದಾರೆ. ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ. ಇದೊಂದು ಉದ್ದೇಶ ಪೂರ್ವಕವಾದ ಲವ್ ಜಿಹಾದ್ ಪ್ರಕರಣವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಯುವತಿಯ ಸಹೋದರ ದೂರು ನೀಡಿದ್ದಾರೆ. ಈ ಪ್ರಕರಣದಿಂದ ಕುಟುಂಬದವರು ಸಾಕಷ್ಟು ನೊಂದಿದ್ದೇವೆ. ತಾವುಗಳು ನಮಗೆ ನ್ಯಾಯ ದೊರಕಿಸಿ, ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾ ವರಿಷ್ಠಾಧಿಕಾರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ, ಹೊತ್ತಿ ಉರಿದ ಆಟೋ – ಚಾಲಕ, ಸವಾರನಿಗೆ ಗಾಯLive Tv
[brid partner=56869869 player=32851 video=960834 autoplay=true]
Sign in to your account
Username or Email Address


Password

 Remember Me


