ಚಿಕ್ಕಬಳ್ಳಾಪುರ: ಖಾಸಗಿ ಬಸ್ (Bus) ರಸ್ತೆ ಬದಿ ಉರುಳಿಬಿದ್ದ (Overturn) ಪರಿಣಾಮ 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಮಿಟಗಾನಹಳ್ಳಿ ಬಳಿ ನಡೆದಿದೆ.ಶನಿವಾರ ರಾತ್ರಿ ಹಿಂದೂಪುರದಿಂದ ತಿರುಪತಿಗೆ ತೆರಳುತ್ತಿದ್ದ ಭಾರತಿ ಖಾಸಗಿ ಬಸ್ ಇದಾಗಿದ್ದು, ಬಸ್‌ನಲ್ಲಿ 45 ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿ ಉರುಳಿಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಇದನ್ನೂ ಓದಿ: ಮಂಗಳೂರಿನ ಆಟೋದಲ್ಲಿ ಕುಕ್ಕರ್ ಸ್ಫೋಟ – ನಟ್‌, ಬೋಲ್ಟ್‌, ಬ್ಯಾಟರಿ ಪತ್ತೆಬಹುತೇಕ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೆಲವರಿಗೆ ಬೆನ್ನು ಮೂಳೆ, ಕೈ ಕಾಲು, ಕಣ್ಣಿನ ಭಾಗದಲ್ಲಿ ಗಾಯಗಳಾಗಿವೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿದು ಶಾಸಕ ಜೆಕೆ ಕೃಷ್ಣಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದಾರೆ. ತಡರಾತ್ರಿ ಗಾಯಾಳುಗಳಿಗೆ ಊಟದ ವ್ಯವಸ್ಥೆಯನ್ನೂ ಮಾಡಿದ್ದಾರೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲೂ ಅಕ್ರಮ?
Sign in to your account
Username or Email Address


Password

 Remember Me


