ಮಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ (Nalin Kumar Kateel) ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಚಾರಿಸಿದರು.ಬಾವುಟಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ (Kedambadi Ramaiah Gowda) ರ ಪ್ರತಿಮೆ ಲೋಕಾರ್ಪಣೆ ಮಾಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ ಅಲ್ಲಿಂದ ನೇರವಾಗಿ ಎ.ಜೆ ಆಸ್ಪತ್ರೆ (A J Hosppital) ಗೆ ತೆರಳಿದ್ದಾರೆ. ಅಲ್ಲಿ ಕಟೀಲ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.ಇಂದು ಮಂಗಳೂರು ಪ್ರವಾಸದ ಸಂದರ್ಭದಲ್ಲಿ ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲಾಯಿತು. @BJP4Karnataka @nalinkateel pic.twitter.com/Uc8GSq08MP— Basavaraj S Bommai (@BSBommai) November 19, 2022ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಇಂದು ಮಂಗಳೂರು ಪ್ರವಾಸದ ಸಂದರ್ಭದಲ್ಲಿ ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲಾಯಿತು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಹೋರಾಟಗಾರರೊಂದಿಗೆ ಕೂತು ಪ್ರಚಾರ ಪಡೆದು ಹೋದ ಯು.ಟಿ ಖಾದರ್‌ಗೆ ಟೋಲ್ ಗೇಟ್ ತೆರವು ಮಾಡಲು ಸಾಧ್ಯವಾಯಿತೇ?: ಭರತ್ ಶೆಟ್ಟಿಇಂದು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ನನ್ನನ್ನು ವೈಯಕ್ತಿಕವಾಗಿ ಭೇಟಿಯಾಗಿ ಆರೋಗ್ಯ ಕುಶಲೋಪರಿ ವಿಚಾರಿಸಿ ಶುಭ ಹಾರೈಸಿದ ಸಿಎಂ ಶ್ರೀ @BSBommai ಅವರಿಗೆ ಧನ್ಯವಾದಗಳು. https://t.co/VcjMsmCc8G— Nalinkumar Kateel (@nalinkateel) November 19, 2022ಇತ್ತ ಕಟೀಲ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಇಂದು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ನನ್ನನ್ನು ವೈಯಕ್ತಿಕವಾಗಿ ಭೇಟಿಯಾಗಿ ಆರೋಗ್ಯ ಕುಶಲೋಪರಿ ವಿಚಾರಿಸಿ ಶುಭ ಹಾರೈಸಿದ ಸಿಎಂ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
Sign in to your account
Username or Email Address


Password

 Remember Me


