ಚಿಕ್ಕಮಗಳೂರು: ಹಿಂದೂ-ಮುಸ್ಲಿಮರ ಧಾರ್ಮಿಕ ಭಾವೈಕ್ಯತಾ ಕೇಂದ್ರ ಹಾಗೂ ವಿವಾದಿತ ಪ್ರದೇಶವೂ ಆಗಿರುವ ದತ್ತಪೀಠದ (Datta Peetha) ಆಡಳಿತಕ್ಕೆ ರಾಜ್ಯ ಸರ್ಕಾರ (Government) ನೇಮಕ ಮಾಡಿದ ವ್ಯವಸ್ಥಾಪನ ಸಮಿತಿ ವಿರುದ್ಧ ಅಪಸ್ವರ ಕೇಳಿ ಬಂದಿದೆ.ಸಮಿತಿಯಲ್ಲಿ ಎರಡು ಸಮುದಾಯಕ್ಕೆ ಸೇರಿದ ಎಂಟು ಜನರಿರಬೇಕಿತ್ತು. ಆದರೆ, ಒಂದೇ ಸಮುದಾಯಕ್ಕೆ ಸೇರಿದ ಏಳು ಜನರಿದ್ದಾರೆ. ಈ ಸಮಿತಿ ಮೇಲೆ ನಂಬಿಕೆ ಇಲ್ಲ. ಕೂಡಲೇ ಈ ಸಮಿತಿಯನ್ನು ಅನೂರ್ಜಿತಗೊಳಿಸಬೇಕೆಂದು ಕೋಮು ಸೌಹಾರ್ದ ವೇದಿಕೆ ಆಗ್ರಹಿಸಿದೆ. ಇದನ್ನೂ ಓದಿ: 1 ರೂ.ಗೆ ಲೀಸ್ ಪಡೆದಿದ್ದ ಅವಧಿ ಮುಕ್ತಾಯ – ಜಾಗ ಬಿಟ್ಟುಕೊಡುವಂತೆ ಕೇಳಿದ ದೇವಸ್ಥಾನ ಮಂಡಳಿನಗರದಲ್ಲಿ ಮಾತನಾಡಿದ ಕೋಮು ಸೌಹಾರ್ದ ವೇದಿಕೆ ರಾಜ್ಯ ಕಾರ್ಯದರ್ಶಿ ಗೌಸ್ ಮೊಹಿನುದ್ದಿನ್, ಸಮಿತಿಯಲ್ಲಿ ಏಳು ಮಂದಿ ಸದಸ್ಯರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಕಮಿಟಿಯನ್ನು ಕೂಡಲೇ ರದ್ದುಪಡಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಸರ್ಕಾರ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಆಡಳಿತಾತ್ಮಕ ಅನುಕೂಲಕ್ಕಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ಎಂಟು ಜನರ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಿದೆ. ಆದರೆ, ಮುಸ್ಲಿಂ ಸಮುದಾಯದ ಕೇವಲ ಒಬ್ಬರನ್ನು ಕಮಿಟಿ ಸದಸ್ಯರನ್ನಾಗಿ ನೇಮಿಸಿ, ಉಳಿದ 7 ಜನರನ್ನು ಒಂದೇ ಸಮುದಾಯಕ್ಕೆ ಸೇರಿದವರನ್ನು ನೇಮಿಸಿದೆ. ಈ ಮೂಲಕ ಸರ್ಕಾರ ತಾರತಮ್ಯ ನೀತಿ ಅನುಸರಿಸಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಕ – ಹಿಂದೂಗಳ 5 ದಶಕಗಳ ಹೋರಾಟಕ್ಕೆ ಜಯ ಎಂದ ಸಿಟಿ ರವಿಹಾಲಿ ಕಮಿಟಿಯನ್ನು ಅನೂರ್ಜಿತಗೊಳಿಸಬೇಕು. ಎರಡು ಸಮುದಾಯಕ್ಕೆ ಸೇರಿದ ಸದಸ್ಯರನ್ನು ಸಮಾನ ರೀತಿ ಹಾಗೂ ಇಬ್ಬರು ಮಹಿಳೆಯನ್ನೊಳಗೊಂಡ ಪಾರದರ್ಶಕ ಸಮಿತಿಯನ್ನು ರಚಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕಮಿಟಿ 1989ರ ಧಾರ್ಮಿಕ ದತ್ತಿ ಆಯುಕ್ತರ ಆದೇಶಕ್ಕೆ ಪೂರಕವಾಗಿರಬೇಕು. ಇಲ್ಲವಾದಲ್ಲಿ ವೇದಿಕೆ ವತಿಯಿಂದ ಜನಪರ ಮತ್ತು ಕಾನೂನು ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
Sign in to your account
Username or Email Address


Password

 Remember Me


