ಬೆಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ (Collage) ಮೂವರು ವಿದ್ಯಾರ್ಥಿಗಳು (Students) ಪಾಕಿಸ್ತಾನ ಜಿಂದಾಬಾದ್ (Pakistan zindabad) ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ಬಗ್ಗೆ ವೀಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯರು ಕಾಲೇಜಿನ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಜೊತೆಗೆ ಅದೇ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಹಪಾಠಿಗಳು ಜೈ ಕರ್ನಾಟಕ ಮಾತೆ ಎನ್ನಬೇಕೆಂದು ಪಟ್ಟು ಹಿಡಿದಿದ್ದರು. ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ಗೋಲ್ಮಾಲ್ – ಚಿಲುಮೆ ಸಂಸ್ಥೆಯ ನಾಲ್ವರು ಪೊಲೀಸರ ವಶಕ್ಕೆಈ ಘಟನೆಯಿಂದ ಪರಿಸ್ಥಿತಿ ಹದಗೆಡುತ್ತಿದ್ದಂತೆ ಸ್ಥಳಕ್ಕೆ ಮಾರತ್‌ಹಳ್ಳಿ ಪೊಲೀಸರು ಆಗಮಿಸಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ತಮಾಷೆಗಾಗಿ ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಕೂಗಿದ್ದಾಗಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಮನಿಗಿಂತ ರಾವಣ ಜ್ಞಾನಿ – ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ: ರಾಜನಾಥ್ ಸಿಂಗ್
Sign in to your account
Username or Email Address


Password

 Remember Me


