ಬೆಂಗಳೂರು: ಮೆಜೆಸ್ಟಿಕ್‌ನಲ್ಲಿರುವ ಶಾಂತಲಾ ಸರ್ಕಲ್(Shantala Circle) ಮತ್ತು ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ (Sangolli Rayanna)  ರಸ್ತೆ ಒಂದು ತಿಂಗಳು ಬಂದ್ ಆಗಲಿದೆ.ವೈಟ್ ಟ್ಯಾಪಿಂಗ್(White Topping) ಕಾಮಗಾರಿ ಶನಿವಾರದಿಂದ ಆರಂಭವಾಗಲಿರುವ ಹಿನ್ನೆಲೆ ಒಂದು ತಿಂಗಳು ಸಂಚಾರ ಬಂದ್ ಆಗಲಿದೆ.  ಇದನ್ನೂ ಓದಿ: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ – ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ((BBMP) ಯೋಜನೆ ಕೇಂದ್ರ-1 ವಿಭಾಗದ ವತಿಯಿಂದ ನಗರದ ಗುಬ್ಬಿ ತೋಟದಪ್ಪ ರಸ್ತೆಯನ್ನು ಶಾಂತಲಾ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ ಸುಮಾರು 580 ಮೀಟರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ.ಈ ಅವಧಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಆಗುವ ಅನಾನುಕೂಲವನ್ನು ತಪ್ಪಿಸಲು ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಬಿಬಿಎಂಪಿ ಮನವಿ ಮಾಡಿದೆ.
Sign in to your account
Username or Email Address


Password

 Remember Me


