ರಾಯಚೂರು: ಗ್ರಾಮಕ್ಕೆ ಸರ್ಕಾರಿ ಬಸ್ (Government Bus) ವ್ಯವಸ್ಥೆ ಇಲ್ಲದ ಕಾರಣಕ್ಕೆ ಟಾಟಾ ಏಸ್ ನಲ್ಲಿ ಹೊರಟಿದ್ದ ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ಕುಣಿಕೆಲ್ಲೂರು ಬಳಿ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ (TATA ACE) ಪಲ್ಟಿಯಾದ ಹಿನ್ನೆಲೆ 20ಕ್ಕೂ ಹೆಚ್ಚು ಜನ ಶಾಲಾ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಕುಣಿಕೆಲ್ಲೂರು ಗ್ರಾಮದಿಂದ ಸಂತೆಕೆಲ್ಲೂರು ಸರ್ಕಾರಿ ಪ್ರೌಢಶಾಲೆಗೆ ಹೊರಟಿದ್ದ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನ ಲಿಂಗಸುಗೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಓವರ್ ಟೇಕ್ ವೇಳೆ ದುರಂತ- ಬಿಎಂಟಿಸಿ ಬಸ್ಸಿಗೆ ಬೈಕ್ ಸವಾರ ಬಲಿಸರ್ಕಾರಿ ಬಸ್ ವ್ಯವಸ್ಥೆ ಇಲ್ಲದ್ದಕ್ಕೆ ಈ ಅವಘಡ ನಡೆದಿದೆ ಅಂತ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಮಾಹಿತಿ ಪಡೆದು ಶಾಸಕ ಬಸನಗೌಡ ತುರ್ವಿಹಾಳ ಹಾಗೂ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Sign in to your account
Username or Email Address


Password

 Remember Me


