ಶಿವಮೊಗ್ಗ: ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಎಲ್ಲಿ ಸ್ಪರ್ಧಿಸಿದರೂ ಸೋಲುತ್ತೇನೆ ಎನ್ನುವ ಭಯ ಅವರನ್ನು ಕಾಡುತ್ತಿದೆ. ಹೀಗಾಗಿ ಸಿದ್ದರಾಮಯ್ಯ ಅವರಿಗೆ ಗತಿ ಇಲ್ಲದಂತಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ವ್ಯಂಗ್ಯ ಮಾಡಿದರು.ಶಿವಮೊಗ್ಗ (Shivamogga) ದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ 224 ಕ್ಷೇತ್ರದಲ್ಲಿ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುತ್ತೇನೆ ಎನ್ನುತ್ತಾರೆ. ಆದರೆ ಕಾಂಗ್ರೆಸ್ (Congress) ಪಕ್ಷಕ್ಕೆ ಅರ್ಜಿ ಸಲ್ಲಿಸಲು ನಿನ್ನೆ ಕಡೆಯ ದಿನವಾದರೂ ಪಾಪ ಅವರು ಅರ್ಜಿ ಸಲ್ಲಿಸಿಲ್ಲ ಎಂದರು. ಇದನ್ನೂ ಓದಿ: ಟಿಪ್ಪು ಪ್ರತಿಮೆ ಬೇಡ ಎಂದ ಸಿಎಂ ಇಬ್ರಾಹಿಂ ವಿರುದ್ಧ ಚೇತನ್‌ ಕಿಡಿ – ಟಿಪ್ಪು ಸುಲ್ತಾನ್ ಆಧುನಿಕ ಕರ್ನಾಟಕದ ಐಕಾನ್ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಲು ಕ್ಷೇತ್ರ ಹುಡುಕಾಟದಲ್ಲಿ ಇದ್ದಾರೆ. ಅವರಿಗೆ ಇನ್ನೂ ಕ್ಷೇತ್ರ ಸಿಕ್ಕಿಲ್ಲ. ಅದಕ್ಕಾಗಿಯೇ ಅರ್ಜಿ ಸಲ್ಲಿಸಿಲ್ಲ. ಕ್ಷೇತ್ರ ಸಿಕ್ಕದಿರುವ ಸಿದ್ದರಾಮಯ್ಯ ನಾನು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುತ್ತೇನೆ ಎನ್ನುತ್ತಾರೆ. ಮೊದಲು ಅವರ ಪಕ್ಷಕ್ಕೆ ಅರ್ಜಿ ಹಾಕಲಿ. ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಪಾಪ ಅನಿಸುತ್ತದೆ ಎಂದರು.
Sign in to your account
Username or Email Address


Password

 Remember Me


