ಮೈಸೂರು: ಪ್ರಧಾನಿ ಮೋದಿ (Narendra Modi) ಅವರಿಂದಲೇ ಬೆನ್ನಿಗೆ ಗುದ್ದು ಕೊಡಿಸಿಕೊಂಡ ರಾಮದಾಸ್‌ (S.A.Ramdas) ಅವರಿಗೆ ಕಿರುಕುಳ ಕೊಡುವ ಶಕ್ತಿ ನನಗೆ ಎಲ್ಲಿದೆ ಹೇಳಿ ಎಂದು ಶಾಸಕ ಎಸ್‌.ಎ.ರಾಮದಾಸ್‌ ಆರೋಪಕ್ಕೆ ಸಂಸದ ಪ್ರತಾಪ್‌ ಸಿಂಹ (Pratap Simha) ತಿರುಗೇಟು ನೀಡಿದ್ದಾರೆ.ಗುಂಬಜ್‌ (Gumbaz) ಮಾದರಿಯಲ್ಲಿ ಮೈಸೂರು ಬಸ್‌ ನಿಲ್ದಾಣ (Mysuru Bus Stand) ನಿರ್ಮಾಣ ವಿವಾದದ ವಿಚಾರ ಮುಂದಿಟ್ಟುಕೊಂಡು ನನ್ನನ್ನು ಪಕ್ಷದಿಂದ ಬಿಡಿಸಲು ಕಿರುಕುಳ ನೀಡಲಾಗುತ್ತಿದೆ ಎಂಬ ಶಾಸಕ ರಾಮದಾಸ್‌ ಆರೋಪಕ್ಕೆ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ಪಕ್ಷದಿಂದ ಬಿಡಿಸಲು ಕಿರುಕುಳ- ರಾಮ್‍ದಾಸ್ ಪರೋಕ್ಷ ಆರೋಪರಾಮದಾಸ್ ನಮ್ಮ ಹಿರಿಯ ನೇತಾರರು. ಗುಂಬಜ್ ಹೊಡೆದರೆ ಟಿಪ್ಲು ಅನುಯಾಯಿಗಳಿಗೆ ಕಿರುಕುಳ ಆಗುತ್ತದೆ. ಶಿವಾಜಿ ಅನುಯಾಯಿಗಳಿಗೆ ಕಿರುಕುಳ ಅನಿಸುವುದಿಲ್ಲ. ರಾಮದಾಸ್ ಅವರು ಯಾವ ಅರ್ಥದಲ್ಲಿ ತಮಗೆ ಕಿರುಕುಳ ಆಗಿದೆ ಎಂದು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ.ಮೈಸೂರಿನ ರಾಜಕಾರಣಿಗಳ ಬಳಿ ನನ್ನನ್ನೆ ಸುಟ್ಟು ಹಾಕುವಷ್ಟು ಹಣವಿದೆ. ಅವರಿಗೆ ಕಿರುಕುಳ ಕೊಡುವಷ್ಟು ಶಕ್ತಿವಂಥ ನಾನಲ್ಲ. ನಾನು ರಿಯಲ್ ಎಸ್ಟೇಟ್ ಮಾಡಲು ರಾಜಕಾರಣಕ್ಕೆ ಬಂದಿಲ್ಲ. ಮೈಸೂರಿನ ರಾಜಕಾರಣಿಗಳ ಜೊತೆ ಸೇರಿಕೊಂಡು ವ್ಯವಹಾರ ಮಾಡುವ ಅವಶ್ಯಕತೆ ಇಲ್ಲ. ನಾನು ಅಭಿವೃದ್ಧಿಗಾಗಿ ರಾಜಕಾರಣ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿವಾದಿತ ಗುಂಬಜ್ ತೆರವಿಗೆ ಪ್ರತಾಪ್ ಸಿಂಹ ಕೊಟ್ಟಿದ್ದ ಡೆಡ್‍ಲೈನ್ ಅಂತ್ಯ- ಇಂದು ತೆರವಿಗೆ ಮುಂದಾಗ್ತರಾ ಸಂಸದರು?ರಾತ್ರಿ ಕೆಲಸ ಮಾಡುವುದು ಕಳ್ಳರು. ರಾತ್ರಿ ಯಾಕೆ ಬಸ್ ನಿಲ್ದಾಣದ ಕೆಲಸ ಮಾಡಬೇಕು? ಬಸ್ ನಿಲ್ದಾಣಕ್ಕೆ ಹೆಸರಿಡಲು ಕಾನೂನಿದೆ. ರಾತ್ರೋರಾತ್ರಿ ಹೇಗೆ ಹೆಸರಿಟ್ಟರು. ಈ ವಿಚಾರದಲ್ಲಿ ಎಲ್ಲಾ ಕಾನೂನು ಉಲ್ಲಂಘನೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಧ್ಯ ಪ್ರವೇಶಿಸಿದೆ. ಅವರೇ ಅನಧಿಕೃತ ಕಟ್ಟಡ ಎಂದು ಹೇಳಿದ್ದಾರೆ. ಅವರು ತೆರವು ಮಾಡಬಹುದು. ಮೂಲ ವಿನ್ಯಾಸದಲ್ಲಿ ಗುಂಬಜ್ ಇಲ್ಲ. ಹೊಸ ವಿನ್ಯಾಸದಲ್ಲಿ ಗುಂಬಜ್ ಇದೆ. ಆ ನಕ್ಷೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಹಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೊಟ್ಟ ಗಡುವು ಮುಗಿದ ಮೇಲೆ ಏನಾಗುತ್ತೋ ನೋಡೋಣ ಎಂದು ಹೇಳಿದ್ದಾರೆ.ನಾನು ಅಂದುಕೊಂಡಿದ್ದನ್ನು ಸಾಧಿಸಿ ತೋರಿಸಿದ್ದೇನೆ. ಟಿಪ್ಪು ಏಕ್ಸ್‌ಪ್ರೆಸ್‌ ಬದಲಾಯಿಸುತ್ತೇನೆ ಎಂದು ಹೇಳಿದ್ದೆ, ಬದಲಾಯಿಸಿದ್ದೇನೆ. ಮಹಿಷಾ ದಸರಾ ನಿಲ್ಲಿಸಿದ್ದೇನೆ. ಗುಂಬಜ್ ವಿಚಾರದಲ್ಲೂ ನನ್ನ ಮಾತಿಗೆ ಬದ್ಧ. ಬಸ್ ನಿಲ್ದಾಣದ ಮೇಲಿನ ಅನಧಿಕೃತ ಗುಂಬಜ್ ತೆರವು ಮಾಡಲೇಬೇಕು. ಮೈಸೂರಿನ ಅಭಿವೃದ್ಧಿ ಕಾರ್ಯಗಳು ಮಹಾರಾಜರ ಹೆಸರು ಹೇಳಬೇಕೆ ವಿನಃ ಅವರ ಶತೃಗಳ ಹೆಸರಲ್ಲ. ಗುಂಬಜ್ ಬಗ್ಗೆ ಪರಿಶೀಲನೆಗೆ ಹೊಸ ತಜ್ಞರ ಸಮಿತಿ ಅವಶ್ಯಕತೆ ಇಲ್ಲ. ಕೆಆರ್‌ಐಡಿಎಲ್‌ನ ತಜ್ಞರೇ ಮೂಲ ನಕ್ಷೆಗೆ ಅನುಮತಿ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಗುಂಬಜ್ ಗುದ್ದಾಟಕ್ಕೆ ಟ್ವಿಸ್ಟ್ – ಬಸ್‌ನಿಲ್ದಾಣದ ಜಾಗ ನಮ್ಮದು, ತೆರವು ಮಾಡಿ ಎಂದ NHAI
Sign in to your account
Username or Email Address


Password

 Remember Me


