ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಅವರು ಹಿಂದೆ ಬಿಜೆಪಿ ಜೊತೆ, ಆಮೇಲೆ ಕಾಂಗ್ರೆಸ್ ಜೊತೆ ಸೇರಿಕೊಂಡು ಸರ್ಕಾರ ರಚಿಸಿ, ಸಿಎಂ ಹುದ್ದೆ ಅಲಂಕರಿಸಿದ್ದರು. ಈಗ ಪುನಃ ಬಿಜೆಪಿ (BJP) ಜೊತೆ ಹೋಗಿದ್ದಾರೆ. ಅವರದ್ದು ಅವಕಾಶವಾದಿ ಮೈತ್ರಿ. ಅವರು ತಮ್ಮ ಸರ್ಕಾರವನ್ನೇ ಉಳಿಸಿಕೊಳ್ಳಲಿಲ್ಲ. ಈಗ ನಮ್ಮ ಸರ್ಕಾರ ಉರುಳಿಸುವ ಮಾತುಗಳನ್ನು ಆಡುತ್ತಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (M.B Patil) ಅವರು ಹೆಚ್‍ಡಿಕೆ ವಾಗ್ದಾಳಿ ನಡೆಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮೊದಲು ಪಾದಯಾತ್ರೆಗೆ ತಮ್ಮ ನೈತಿಕ ಬೆಂಬಲವೂ ಇಲ್ಲ ಎಂದಿದ್ದರು. ಆಮೇಲೆ ಯಾರದೋ ಒತ್ತಡಕ್ಕೆ ಮಣಿದು ಕಾಟಾಚಾರಕ್ಕೆ ಪಾದಯಾತ್ರೆಗೆ ಹೋಗಿದ್ದಾರೆ ಎಂದು ಅವರು ಕುಟುಕಿದರು.ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವ ತಪ್ಪೂ ಇಲ್ಲ. ಸ್ವತಃ ಮುಡಾ ತಪ್ಪು ಮಾಡಿ, ಅದನ್ನು ಒಪ್ಪಿಕೊಂಡಿದೆ. ನಿಯಮಗಳಂತೆಯೇ ಸಿಎಂ ಪತ್ನಿಗೆ ಬದಲಿ ನಿವೇಶನಗಳನ್ನು ಅದು ಕೊಟ್ಟಿದೆ. ಇದರಲ್ಲಿ ಸಿದ್ದರಾಮಯ್ಯ ಅವರ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದರು.ಕಾಂಗ್ರೆಸ್ (Congress) ನಾಯಕ ಕೆ.ಸಿ ವೇಣುಗೋಪಾಲ್ ಅವರು ಸಚಿವರ ಸಭೆ ಕರೆದಿರುವುದರಲ್ಲಿ ತಪ್ಪೇನೂ ಇಲ್ಲ. ಪಕ್ಷದ ಹಿತದೃಷ್ಟಿಯಿಂದ ಅವರು ನಮಗೆ ಸಲಹೆ ಕೊಡಬಹುದಷ್ಟೆ. ಇದಕ್ಕಿಂತ ಹೆಚ್ಚು ಈ ಬಗ್ಗೆ ನನಗೇನೂ ಗೊತ್ತಿಲ್ಲ. ಪೊಲೀಸ್ ಎಸ್‍ಐ ಒಬ್ಬರು ಸತ್ತಿರುವುದರ ಹಿಂದೆ ಅಲ್ಲಿನ ಕಾಂಗ್ರೆಸ್ ಶಾಸಕರ ಕೈವಾಡವೇನೂ ಇಲ್ಲ. ಈಗ ಪ್ರತಿಯೊಂದಕ್ಕೂ ಶಾಸಕರು ಮತ್ತು ಮಂತ್ರಿಗಳನ್ನು ದೂರುವುದು ಒಂದು ಕಾಯಿಲೆಯಾಗಿದೆ ಎಂದು ಬೇಸರ ಹೊರಹಾಕಿದರು.Sign in to your account
Username or Email Address


Password

 Remember Me


