ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಗಂಡನ ಕಿರುಕುಳದಿಂದ ಹೆಂಡತಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಒಂದಿಲ್ಲೊಂದು ಬೆಳಕಿಗೆ ಬರುತ್ತಲೇ ಇವೆ. ಗಂಡಂದಿರ ದುರಭ್ಯಾಸ ಚಟಗಳಿಗೆ ಮಹಿಳೆಯರು (Women) ಬಲಿಯಾಗುತ್ತಿರುವುದನ್ನು ಕಾಣುತ್ತಲೇ ಇದ್ದೇವೆ. ಆದರೆ ಬೆಂಗಳೂರಿನಲ್ಲಿ ನಡೆದಿರುವ ಘಟನೆ ಇದಕ್ಕೆ ತದ್ವಿರುದ್ಧವಾಗಿದೆ. ಹೆಂಡತಿಯ ಹಣದ ದಾಹ ನೀಗಿಸಲಾಗದೇ ಬೇಸತ್ತ ಗಂಡ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ.ಹೆಂಡತಿಯ ಕಾಟ ತಾಳಲಾರದೆ ಡೆತ್‌ನೋಟ್ ಬರೆದಿಟ್ಟು ಪ್ರಾಣ ಕಳೆದುಕೊಂಡಿದ್ದಾನೆ. ಬೆಂಗಳೂರಿನ (Bengaluru) ಶ್ರೀನಗರ ಬಳಿಯ ಅವಳಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಮಂಡ್ಯದ ನಾಗಮಂಗಲ ಮೂಲದ ಅಣ್ಣಯ್ಯ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕೇಂದ್ರ, ರಾಜ್ಯ ಸರ್ಕಾರಗಳು ರೈತರ ಪಾಲಿಗೆ ಸತ್ತು ಹೋಗಿವೆ – ರೈತರ ಆಕ್ರೋಶಬಾರ್ ಒಂದರಲ್ಲಿ ಕ್ಯಾಶಿಯರ್ ಆಗಿರುವ ಅಣ್ಣಯ್ಯ ಅವರು ಹೆಂಡತಿ ಕಾಟದಿಂದ ಬೇಸತ್ತು ಪ್ರಾಣ ಕಳೆದುಕೊಳ್ಳುತ್ತಿರುವುದಾಗಿ ಡೆತ್ ನೋಟ್‌ನಲ್ಲಿ (DeathNote) ಬರೆದಿಟ್ಟಿದ್ದಾರೆ.ಅಣ್ಣಯ್ಯ ಅವರಿಗೆ ಐದು ವರ್ಷದ ಹಿಂದೆ ಉಮಾ ಎಂಬಾಕೆಯ ಜತೆ ಮದುವೆಯಾಗಿತ್ತು. ಮದುವೆ (Marriage) ಬಳಿಕ ಹಣದ ವಿಚಾರಕ್ಕೆ ಸಂಬಂಧಿಸಿ ಗಂಡ ಹೆಂಡತಿ ಮಧ್ಯೆ ಯಾವಾಗಲೂ ಜಗಳ ಆಗುತ್ತಿತ್ತು. ಎಷ್ಟು ದುಡಿದರೂ ಹೆಂಡತಿ ದುಡ್ಡು-ದುಡ್ಡು ಎನ್ನುತ್ತಾಳೆ. ನಾನು ಎಷ್ಟು ದುಡಿದರೂ ಸಾಕಾಗುವುದಿಲ್ಲ. ಜೀವನದಲ್ಲಿ ನೆಮ್ಮದಿಯೇ ಇಲ್ಲದಂತೆ ಅಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಅಣ್ಣಯ್ಯ ಬರೆದಿಟ್ಟಿದ್ದಾರೆ. ಇದನ್ನೂ ಓದಿ: ನಾನು ನಿನ್ನನ್ನ ಸುಮ್ಮನೆ ಬಿಡಲ್ಲ- ಶ್ರೀನಿವಾಸ್ ಪ್ರಸಾದ್‍ಗೆ ರಮೇಶ್ ತಿರುಗೇಟುಅಲ್ಲದೇ ದಯವಿಟ್ಟು ಜೀವನದಲ್ಲಿ ನಂಬಿಕೆ ಇಡಬಾರದು, ನನ್ನ ಸಾವಿಗೆ ನಾನೇ ಕಾರಣ. ನನ್ನ ಅಕ್ಕ ಹಾಗೂ ಕುಟುಂಬದವರು ದೇಹವನ್ನು ಮಣ್ಣುಮಾಡಬೇಕೆಂಬುದು ನನ್ನ ಕೊನೆಯ ಆಸೆ ಎಂದು ಬರೆದುಕೊಂಡಿದ್ದಾರೆ.ಹನುಮಂತನಗರ ಪೊಲೀಸ್ ಠಾಣಾ (Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು (Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Sign in to your account
Username or Email Address


Password

 Remember Me


