ಕೊಪ್ಪಳ: ಗಂಗಾವತಿ ತಾಲೂಕಿನ ಆನೆಗೊಂದಿ(Anegundi) ಗ್ರಾಮದ ಕೊಸಗಿರಿ ಓಣಿಯ ಅಕ್ರಮವಾಗಿ ಗೋವಿನ ಮಾಂಸವನ್ನು(Illegal Slughter House) ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪೊಲೀಸರು(Police) ದಾಳಿ ನಡೆಸಿದ್ದಾರೆ.ಗೋವಿನ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗಂಗಾವತಿಯ ಗುಂಡಮ್ಮ ಕ್ಯಾಂಪ್‌ ನಿವಾಸಿಯಾದ ಮೊಕ್ತಿಯಾರ್ ಅಹ್ಮದ್‌ ಎಂದು ಗುರುತಿಸಲಾಗಿದೆ.ಕಳೆದ ಸುಮಾರು 6 ತಿಂಗಳಿಂದ ಗ್ರಾಮದಲ್ಲಿ ಶೆಡ್ ಹಾಕಿಕೊಂಡು ಗೋವಿನ ಮಾಂಸವನ್ನು ಮಾರಾಟ ಮಾಡುತ್ತಿದ್ದನು. ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪರಿಶೀಲನೆಯನ್ನು ನಡೆಸಿದ್ದಾರೆ.ಪಶು ವೈದ್ಯರು ಸ್ಥಳಕ್ಕೆ ಆಗಮಿಸಿ ಮಾಂಸವನ್ನು ಪರೀಕ್ಷೆಗೆ ಪಡೆದುಕೊಂಡಿದ್ದಾರೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Sign in to your account
Username or Email Address


Password

 Remember Me


