ಮಂಡ್ಯ: ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು (Cyclist) ನಾಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಕೆ.ಆರ್‌.ಪೇಟೆ (K.R.Pet) ತಾಲೂಕಿನ ಅಕ್ಕಿಹೆಬ್ಬಾಳು ಬಳಿ ನಡೆದಿದೆ.ಪಾಂಡಿಚೇರಿ ಮೂಲದ ಆಲ್ಹರ್ಶ್ (17) ಮೃತ ಕ್ರೀಡಾಪಟು. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರಮಟ್ಟದ ಸೈಕಲ್ ಪೋಲೋ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟಕ್ಕೆ ರಾಜ್ಯ, ಹೊರ ರಾಜ್ಯದಿಂದ ಸೈಕ್ಲಿಂಗ್ ಕ್ರೀಡಾಪಟುಗಳು ಆಗಮಿಸಿದ್ದರು. ಇದನ್ನೂ ಓದಿ: ಟೀಂ ಇಂಡಿಯಾ ಹೀನಾಯ ಸೋಲಿಗೆ ಇದೇ ಕಾರಣ – ಪಾಕ್ ತಜ್ಞರ ವಿಶ್ಲೇಷಣೆಕ್ರೀಡಾಕೂಟದ ಸ್ಥಳದಿಂದ ಅನತಿ ದೂರದ ನಾಲೆ ಬಳಿ ಈಜಲು ಪಾಂಡಿಚೇರಿಯ ಕ್ರೀಡಾಪಟು ಆಲ್ಹರ್ಶ್ ಹೋಗಿದ್ದ. ಈ ವೇಳೆ ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿಶಾಮಕದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿ ನಾಲೆಯಿಂದ ಮೃತದೇಹವನ್ನು ಹೊರತೆಗೆದಿದ್ದಾರೆ.ಸರಿಯಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸದ್ದಕ್ಕೆ ನಾಲೆಗೆ ಕ್ರೀಡಾಪಟು ಹೋಗಿದ್ದ. ಈ ವೇಳೆ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚುನಾವಣಾ ಪ್ರಚಾರಕ್ಕಾಗಿ ಸಿದ್ದರಾಮಯ್ಯಗೆ ಸಿದ್ಧವಾಯ್ತು ಹೈಫೈ ಪ್ರಚಾರದ ಬಸ್
Sign in to your account
Username or Email Address


Password

 Remember Me


