ಶಿವಮೊಗ್ಗ: ಗೌರಿಗದ್ದೆಯ ವಿನಯ್ ಗುರೂಜಿ (Vinay Guruji) ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (Social Media) ಅಪಪ್ರಚಾರ ಮಾಡುತ್ತಿದ್ದು, ಇದರ ವಿರುದ್ಧ ನ.14 ರಂದು ಪ್ರತಿಭಟನಾ (Protest) ಮೆರವಣಿಗೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿನಯ್ ಗುರೂಜಿ ಭಕ್ತವೃಂದ ತಿಳಿಸಿದೆ.ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಘವೇಂದ್ರ ಹೆಬ್ಬಾರ್ ಮತ್ತು ಶಂಕರ್, ವಿನಯ್ ಗುರೂಜಿಯವರು (Vinay Guruji) ಈ ನಾಡಿನ ಧಾರ್ಮಿಕ ನಾಯಕರು. ಈ ದೇಶದ ಸಂಸ್ಕೃತಿಯ ಎತ್ತಿ ಹಿಡಿಯುವ ಕೆಲಸ ಮಾಡುತ್ತಿದ್ದಾರೆ. ದೇಶ-ವಿದೇಶಗಳಲ್ಲೂ ಅವರಿಗೆ ಭಕ್ತರಿದ್ದಾರೆ. ಇಂತಹ ವ್ಯಕ್ತಿಯ ಬಗ್ಗೆ ಇತ್ತೀಚೆಗೆ ಅಪಪ್ರಚಾರ ನಡೆಯುತ್ತಿದೆ. ಅವರ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ. ಇದು ಅವರ ಭಕ್ತವೃಂದಕ್ಕೆ ತುಂಬಾ ನೋವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕರೆಂಟ್‌ ತಗುಲಿ ಕಾಮಗಾರಿ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಬಲಿ – ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶಸಾಮಾಜಿಕ ಜಾಲತಾಣಗಳಲ್ಲಿ ಗುರೂಜಿಯವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಆಪಾದನೆ ಮಾಡುವವರು ದಾಖಲೆಗಳಿದ್ದರೆ ನ್ಯಾಯಾಲಯದ ಮೊರೆ ಹೋಗಲಿ. ಸರ್ಕಾರ ಸಹ ಈ ಬಗ್ಗೆ ತನಿಖೆ ನಡೆಸಿ, ಕಾಣದ ಕೈಗಳನ್ನು ಮಟ್ಟಹಾಕಲಿ. ಸುಖಾಸುಮ್ಮನೇ ಆರೋಪ ಮಾಡುವುದು ಶೋಭೆ ತರುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಬಾಲಕಿ ರೇಪ್‌ಕೇಸ್ – ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 1 ಲಕ್ಷ ಬಹುಮಾನಆಶ್ರಮದ ಬಗ್ಗೆ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುವುದು ಹವ್ಯಾಸವಾಗಿಬಿಟ್ಟಿದೆ. ಗುರೂಜಿಯವರನ್ನು ಅಪರಾಧಿ ಎಂದು ಬಿಂಬಿಸಿ ಭಕ್ತರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ. ಗುರೂಜಿಯವರ ಬೆಂಬಲಕ್ಕೆ ಭಕ್ತರಿದ್ದಾರೆ. ವಿನಯ್ ಗುರೂಜಿ ಭಕ್ತರಲ್ಲಿ ಆತ್ಮಸ್ಥೈರ್ಯ ತುಂಬಲು ನ.14ರ ಬೆಳಗ್ಗೆ 10:30ಕ್ಕೆ ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ (Protest) ನಡೆಸಲಾಗುವುದು ಎಂದು ಹೇಳಿದ್ದಾರೆ.
Sign in to your account
Username or Email Address


Password

 Remember Me


