ಬೀದರ್: ಉದ್ಯೋಗಕ್ಕಾಗಿ ಆನ್‍ಲೈನ್‍ನಲ್ಲಿ (Online) ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾದ ಉಪನ್ಯಾಸಕಿ (Teacher)  ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.ಆರತಿ ಕನಾಟೆ (28) ಆತ್ಮಹತ್ಯೆ ಮಾಡಿಕೊಂಡ ಟೀಚರ್. ಆನ್‍ಲೈನ್‍ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಹಣದ ವ್ಯವಹಾರ ನಡೆಸಿ ವಂಚನೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನ್‍ಲೈನ್‍ನಲ್ಲಿ ಮನೆಯಲ್ಲೇ ಕುಳಿತು ಉದ್ಯಮ ಮಾಡಲು ಹಣ ಹೂಡಿಕೆ ಮಾಡಿ ಎಂದ ವ್ಯಕ್ತಿಯನ್ನು ನಂಬಿದ ಉಪನ್ಯಾಸಕಿ ಬರೋಬ್ಬರಿ 2.50 ಲಕ್ಷ ವರೆಗೆ ಹಣ ಕಳುಹಿಸಿದ್ದಾರೆ. ಬಳಿಕ ಇನ್ನೂ 82 ಸಾವಿರ ಹಣ ಕಳಿಸಿದ್ರೆ ಉದ್ಯೋಗದ ಜೊತೆಗೆ ಹೂಡಿಕೆ ಮಾಡಿದ ಎಲ್ಲಾ ಹಣವನ್ನು ವಾಪಸ್ ಕೊಡುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ತನ್ನ ಲವರ್ ಜೊತೆ ಮಗಳಿಗೆ ಮದುವೆ ಮಾಡಿಸಿದ ತಾಯಿ – ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಮನೆಯವರ ಗಮನಕ್ಕೆ ತಾರದೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಭೀತಿಯಿಂದ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಹಣ ಹೂಡಿಕೆ ಮಾಡಿದ್ದ ಏಜೆನ್ಸಿ ಬಗ್ಗೆ ಡೆತ್‍ನೋಟ್‍ನಲ್ಲಿ ಉಲ್ಲೇಖ ಮಾಡಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಉಪನ್ಯಾಸಕಿ ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ (Collage) ಕಾರ್ಯನಿರ್ವಹಿಸುತ್ತಿದ್ದರು. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಪಿತೂರಿ ಕೇಸ್- ಮಠದ ಅಡುಗೆ ಸಹಾಯಕಿ ಅರೆಸ್ಟ್
Sign in to your account
Username or Email Address


Password

 Remember Me


