ಬೆಳಗಾವಿ: ಸತೀಶ್ ಜಾರಕಿಹೊಳಿ ಭಾಷಣದ ವೇಳೆ ಇನ್ನೊಂದು ವಿವಾದವನ್ನು ಸೃಷ್ಟಿಸಿದ್ದಾರೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮವೀರ ಸಂಭಾಜಿ ಮಹಾರಾಜರಿಗೆ ಸತೀಶ್ ಜಾರಕಿಹೊಳಿ ಅಪಮಾನ ಮಾಡಿದ್ದಾರೆ ಎಂದು ಫಡ್ನವೀಸ್ ಆರೋಪಿಸಿದ್ದಾರೆ.ನವೆಂಬರ್ 6ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಡಿ ನಡೆದಿದ್ದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತನಾಡಿದ್ದ 42 ಸೆಕೆಂಡುಗಳ ಭಾಷಣದ ತುಣುಕನ್ನು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಧರ್ಮವೀರ ಸಂಭಾಜಿ ಮಹಾರಾಜರಿಗೆ ಧರ್ಮವೀರ ಹೆಸರು ಬಂದ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಲ್ಲದೇ ಛತ್ರಪತಿ ಶಿವಾಜಿ ಮಹಾರಾಜರಿಗೆ ವಿಷಪ್ರಾಶನ ಮಾಡಲಾಗಿತ್ತು ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ ಆರೋಪವನ್ನು ಮಾಡಿದ್ದಾರೆ.Mr @RahulGandhi,
Do you agree with this non sensical, misleading, insulting lie spewed out by your party’s MLA, about the great Chhatrapati Sambhaji Maharaj ?
Is this your Congress Party’s official statement ?
Maharashtra will not tolerate this ! pic.twitter.com/mmxjK3PsNU— Devendra Fadnavis (@Dev_Fadnavis) November 10, 2022ಧರ್ಮವೀರ ಸಂಭಾಜಿ ಮಹಾರಾಜರ ಬಗ್ಗೆ ಅಸಂಬದ್ಧ, ದಾರಿತಪ್ಪಿಸುವ, ಅವಮಾನಿಸುವ ಸುಳ್ಳು ಹೇಳಿಕೆಯನ್ನು ಒಪ್ಪುತ್ತೀರಾ? ಎಂದು ರಾಹುಲ್ ಗಾಂಧಿಗೆ ಟ್ವೀಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ. ಇದು ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕೃತ ಹೇಳಿಕೆಯಾ? ಮಹಾರಾಷ್ಟ್ರ ಇದನ್ನು ಸಹಿಸುವುದಿಲ್ಲ ಎಂದು ಫಡ್ನವೀಸ್ ಕಿಡಿಕಾರಿದ್ದಾರೆ. ಇದನ್ನೂ ಓದಿ: ದೇವೇಗೌಡರಿಗೆ ಆಹ್ವಾನ ನೀಡದ್ದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ : ಬಿಜೆಪಿ ವಿರುದ್ಧ ಜೆಡಿಎಸ್‌ ಆಕ್ರೋಶವೀಡಿಯೋದಲ್ಲಿ ಏನಿದೆ?
ಸಂಭಾಜಿ ಮಹಾರಾಜರನ್ನು ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು. ಏಕೆ ಹತ್ಯೆ ಮಾಡಿದರು? ಯಾವಾಗ ಶಿವಾಜಿ ಮಹಾರಾಜರ ಊಟದಲ್ಲಿ ವಿಷ ಹಾಕಲಾಗಿತ್ತು ಈ ವೇಳೆ ಸಂಭಾಜಿ ಮಹಾರಾಜರನ್ನು ಹಿಡಿದಿದ್ದರು. ಈ ಸಿಟ್ಟಿನಲ್ಲಿ ಅವರನ್ನು ಬ್ರಿಟಿಷರ ವಶಕ್ಕೆ ನೀಡಲಾಯಿತು. ಬಳಿಕ ಅವರಿಗೆ ಧರ್ಮವೀರ ಸಂಭಾಜಿ ಮಹಾರಾಜ ಎಂದು ಹೆಸರಿಟ್ಟರು. ಅದೊಂದು ಇತಿಹಾಸ. ಈ ದೇಶದ ಇತಿಹಾಸ ಬಹಳ ವಿಚಿತ್ರವಾಗಿದೆ. ಇದನ್ನು ತಿಳಿದುಕೊಳ್ಳಲು ಬಹಳ ಸಮಯ ಬೇಕು. ಈ ಬಗ್ಗೆ ಬಹಳ ಅಧ್ಯಯನ ಮಾಡಬೇಕಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿರುವ 42 ಸೆಕೆಂಡ್‌ನ ವೀಡಿಯೋವನ್ನು ದೇವೇಂದ್ರ ಫಡ್ನವೀಸ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನವರಿಗೆ ಟಿಪ್ಪು ಮಾತ್ರ ಮನೆದೇವರಾ?: ಕಟೀಲ್ ಕಿಡಿ
Sign in to your account
Username or Email Address


Password

 Remember Me


