ಹುಬ್ಬಳ್ಳಿ: ಭಾರತ (India) ಮತ್ತು ಪಾಕಿಸ್ತಾನ (Pakistan) ಧರ್ಮದ ಆಧಾರದಲ್ಲಿ ಬೇರೆಯಾದ ರಾಷ್ಟ್ರಗಳು. ಪಾಕಿಸ್ತಾನ ಹೇಗೆ ಮುಸ್ಲಿಮರಿಗೆ (Muslims) ಸೀಮಿತವಾಗಿದೆಯೋ ಹಾಗೆ ಭಾರತ ಹಿಂದೂ ರಾಷ್ಟ್ರ (Hindu Nation). ಆದರೆ ಸಂವಿಧಾನದಲ್ಲಿ (Constitution Of India)) ಬಲವಂತವಾಗಿ ಜಾತ್ಯಾತೀತ ಶಬ್ದ ಸೇರಿಸಲಾಗಿದೆ. ಇದನ್ನು ನಾವು ಒಪ್ಪುವುದಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ವಾಗ್ದಾಳಿ ನಡೆಸಿದ್ದಾರೆ.ಟಿಪ್ಪು 100 ಅಡಿ ಮೂರ್ತಿಯನ್ನು ಮೈಸೂರಿನಲ್ಲಿ (Mysuru) ಪ್ರತಿಷ್ಠಾಪನೆ ಮಾಡುತ್ತೇವೆಂಬ ಶಾಸಕ ತನ್ವೀರ್ ಸೇಠ್ (Tanveer Sait) ಹೇಳಿಕೆ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಮುತಾಲಿಕ್, ಮುಸ್ಲಿಂ ಸಮುದಾಯದಲ್ಲಿ (Muslim Community) ಮೂರ್ತಿ ಪೂಜೆ ಇಲ್ಲ ಅದು ಹೇಗೆ ನೀವು ಟಿಪ್ಪು ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೀರಿ? ಇದು ಧರ್ಮ ವಿರೋಧಿ ಹೇಳಿಕೆ ಹೀಗಾಗಿ ಸೇಠ್ ವಿರುದ್ಧ ಫತ್ವಾ ಹೊರಡಿಸಬೇಕು. ಈ ರೀತಿ ಹೇಳಿಕೆ ನೀಡಿದ್ದ ತನ್ವೀರ್ ಸೇಠ್‌ನನ್ನು ಮುಸ್ಲಿಮರೇ ಗಲ್ಲಿಗೇರಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಕೇಳಿದ್ದ ಬೆನ್ನಲ್ಲೇ ಇದೀಗ ಕನಕದಾಸ ಜಯಂತಿಗೂ ಮನವಿ
ಒಂದು ವೇಳೆ ಮೈಸೂರಿನಲ್ಲಿ ಟಿಪ್ಪು ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ, ನಾವು ಧ್ವಂಸ ಮಾಡುತ್ತೇವೆ. ಭಾರತ ಮತ್ತು ಪಾಕಿಸ್ತಾನ ಧರ್ಮದ ಆಧಾರದಲ್ಲಿ ಬೇರೆಯಾದ ರಾಷ್ಟ್ರಗಳು, ಪಾಕಿಸ್ತಾನ ಹೇಗೆ ಮುಸ್ಲಿಂರಿಗೆ ಸೀಮಿತವೋ, ಹಾಗೆ ಭಾರತ ಹಿಂದೂ ರಾಷ್ಟ್ರ. ಸಂವಿಧಾನದಲ್ಲಿ ಬಲವಂತವಾಗಿ ಜಾತ್ಯಾತೀತ ಶಬ್ದ ಸೇರಿಸಲಾಗಿದೆ. ಇದನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗೋಮೂತ್ರದಿಂದ ಶುಚಿ:
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಹಿನ್ನಲೆ, ಪ್ರಮೋದ್ ಮುತಾಲಿಕ್ ಗೋ ಮೂತ್ರ ಸಿಂಪಡಿಸಿ ಸ್ವಚ್ಚಗೊಳಿಸಿದ್ದಾರೆ. ನಿನ್ನೆ ಟಿಪ್ಪು ಜಯಂತಿ ಆಚರಣೆ ಮಾಡಿದ್ದರಿಂದ ಈದ್ಗಾ ಮೈದಾನ ಅಪವಿತ್ರವಾಗಿದೆ. ಹಾಗಾಗಿ ಕನಕ ಜಯಂತಿ ಆಚರಣೆಗೂ ಮುನ್ನ ಈದ್ಗಾ ಮೈದಾನ ಶುಚಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಬಳಿಕ ಶ್ರೀರಾಮಸೇನೆಯಿಂದ ಕನಕದಾಸ ಜಯಂತಿ ಆಚರಿಸಲಾಗಿದೆ.
Sign in to your account
Username or Email Address


Password

 Remember Me


