ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್‌(Vande Bharat) ರೈಲಿಗೆ ಚಾಲನೆ ನೀಡಿದ್ದಾರೆ.ಮೆಜೆಸ್ಟಿಕ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೈಸೂರು- ಚೆನ್ನೈಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಮತ್ತು ಕರ್ನಾಟಕದಿಂದ ಕಾಶಿಗೆ ತೆರಳಲಿರುವ ಕರ್ನಾಟಕ ಭಾರತ್‌ ಗೌರವ್‌ ಕಾಶಿ(Bharat Gaurav Kashi Yatra) ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು. ಇದನ್ನೂ ಓದಿ: ಬೆಂಗ್ಳೂರಿಗೆ ಮೋದಿ ಆಗಮನ – BMTC, KSRTC ಬಸ್ ಸಂಚಾರ 2 ಗಂಟೆ ಸ್ಥಗಿತಈ ಕಾರ್ಯಕ್ರಮಕ್ಕೆ ಮೊದಲು ಬೆಳಗ್ಗೆ ವಿಧಾನಸೌಧಕ್ಕೆ ಆವರಣಕ್ಕೆ ಆಗಮಿಸಿ ಶಾಸಕರ ಭವನದ ಮುಂದೆ ಇರುವ ಕನಕದಾಸ ಮತ್ತು ವಾಲ್ಮಿಕಿ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿದ್ದಾರೆ. ಇಂದು ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ಮೋದಿ ಪುಷ್ಪಾರ್ಚನೆ ಮಾಡಿರುವುದು ವಿಶೇಷ.ಇಂದು ಬೆಳಗ್ಗೆ 9 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಸ್ವಾಗತಿಸಿದರು.
Sign in to your account
Username or Email Address


Password

 Remember Me


