ನವದೆಹಲಿ: ಮಲ್ಲೇಶ್ವರದಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಇಂದು ನಡೆಯಬೇಕಿದ್ದ ವೀರ್ ದಾಸ್(Vir Das) ಹಾಸ್ಯ ಕಾರ್ಯಕ್ರಮ ರದ್ದಾಗಿದೆ.ಇಂದು ಬೆಳಗ್ಗೆಯಿಂದ ಹಿಂದೂ ಜಾಗರಣ ವೇದಿಕೆ(Hindu Jagarana Vedike) ಪ್ರತಿಭಟನೆ ನಡೆಸುತ್ತಿತ್ತು. ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಆಯೋಜಕರು ಹಾಸ್ಯ(Comedy) ಕಾರ್ಯಕ್ರಮ ರದ್ದು ಮಾಡುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.ಇಂದು ಎರಡು ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಭಾರೀ ವಿರೋಧ ಮತ್ತು ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗಿದೆ.ಹಿಂದೂ ಸಂಘಟನೆಗಳ ವಿರೋಧ ಯಾಕೆ?
ಅಮೆರಿಕದಲ್ಲಿ ಭಾರತದ(India) ಬಗ್ಗೆ ಅತ್ಯಂತ ಕೆಟ್ಟದಾಗಿ ಹಾಸ್ಯ ಮಾಡಿ ಅವಹೇಳನ ಮಾಡಿದ್ದಾನೆ. ಈ ಕಾರಣಕ್ಕಾಗಿ ಮುಂಬೈ ಪೋಲಿಸರು ಇವನ ಮೇಲೆ ಪ್ರಕರಣವನ್ನು ದಾಖಲಿಸಿದ್ದರು. ವಿದೇಶದಲ್ಲಿ ಭಾರತದ ಪ್ರಧಾನಿ ಭಾರತದ ಮಹಿಳೆಯರ ವಿರುದ್ಧ ಮತ್ತು ಭಾರತದ ಘನತೆಯ ಬಗ್ಗೆ ಅತ್ಯಂತ ಕೆಟ್ಟದಾಗಿ ಅಪಮಾನ ಮಾಡಿದ ವ್ಯಕ್ತಿಯ ಕಾರ್ಯಕ್ರಮಕ್ಕೆ ನಮ್ಮ ರಾಜ್ಯದಲ್ಲಿ ಅವಕಾಶ ಕೊಡಬಾರದು.  ಇದನ್ನೂ ಓದಿ: ಪತ್ನಿಯನ್ನು ಕೊಚ್ಚಿ ಕೊಂದು ಮನೆಗೆ ಬೀಗ ಹಾಕಿ ಪರಾರಿಯಾದ ಪಾಪಿ ಪತಿಈತ ಕೆಲವು ದಿನಗಳ ಹಿಂದೆ ಅಮೇರಿಕದ ವಾಷಿಗ್ಟನ್ ಡಿಸಿಯಲ್ಲಿ ಮಾತನಾಡಿದ ಒಂದು ವಿಡಿಯೋದಲ್ಲಿ ತಾನು ಎಲ್ಲಿ ಮಹಿಳೆಯರನ್ನು ಬೆಳಗ್ಗೆ ಪೂಜೆ ಮಾಡಿ ರಾತ್ರಿ ಅವರ ಮೇಲೆ ಅತ್ಯಾಚಾರ ಮಾಡುವ ಭಾರತದಿಂದ ಬಂದಿದ್ದೇನೆ ಎಂದು ದೇಶದ ಮಹಿಳೆಯರ ಬಗ್ಗೆ ಕೆಟ್ಟದಾಗಿ ಅಪಮಾನ ಮಾಡಿದ್ದಾನೆ. ಇದು ಭಾರತದ ದಂಡ ಸಂಹಿತೆಯ ಪ್ರಕಾರ ಗಂಭೀರ ಅಪರಾಧವಾಗಿದೆ. ಹೀಗಿರುವಾಗ ಇಂತಹ ವಿವಾದಿತ ವ್ಯಕ್ತಿ ಬೆಂಗಳೂರಿನಂತಹ(Bengaluru) ಅತ್ಯಂತ ಕೋಮು ಸೂಕ್ಚ್ಮ ಪ್ರದೇಶದಲ್ಲಿ ಈ ರೀತಿಯ ವಿವಾದಿತ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದು ಸರಿಯಲ್ಲ. ಈಗಾಗಲೇ ಕರ್ನಾಟಕದಲ್ಲಿ(Karnataka) ಕೋಮು ಘಟನೆಗಳ ಪ್ರಕರಣದಿಂದ ಅನೇಕ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಎದುರಿಸುತ್ತಿರುವಾಗ ಪುನಃ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು. ಕೂಡಲೇ ಈ ಕಾರ್ಯಕ್ರಮವನ್ನು ರದ್ದು ಮಾಡಬೇಕು ಎಂದು ದೂರು ನೀಡಿದ್ದವು.
Sign in to your account
Username or Email Address


Password

 Remember Me


