ಚಿತ್ರದುರ್ಗ: ಮುರುಘಾ ಮಠದಲ್ಲಿ (Murugha Mutt) ಫೋಟೋಗಳು (Photo) ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ.ಬಸವರಾಜನ್ (SK Basavarajan) ಅವರನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.ದಸರಾ ಉತ್ಸವದ ಅಂಗವಾಗಿ ನಡೆದ ಪೀಠಾರೋಹಣದ ಹಿಂದಿನ ದಿನ ಅ.5ರ ಮಧ್ಯರಾತ್ರಿ ವೇಳೆ ರಾಜಾಂಗಣದಲ್ಲಿ ಗೋಡೆಗೆ ಹಾಕಿದ್ದ 47 ಫೋಟೋಗಳು ಕಳ್ಳತನವಾಗಿದ್ದವು. ಧಾರ್ಮಿಕ ಮುಖಂಡರು, ರಾಷ್ಟ್ರಪತಿ, ಪ್ರಧಾನಿ, ಹಾಗೂ ರಾಜ್ಯದ ಸಿಎಂಗಳ ಜೊತೆಗಿನ ಮುರುಘಾಶ್ರೀ ಫೋಟೋಗಳನ್ನು ಕಳ್ಳರು ಕದ್ದೊಯ್ದಿದ್ದರು. ಆ ಬಳಿಕ ವಿಚಾರಣೆ ಆರಂಭಿಸಿದ ಪೊಲೀಸರು ನ.7ರಂದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಪೋಕ್ಸೋ ಸಂಕಷ್ಟ- ಪೊಲೀಸರಿಂದ ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಕೆಹೊಸಹಳ್ಳಿ ಗ್ರಾ.ಪಂ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ, ಎಸ್‍ಜೆಎಮ್ ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕ ಶಿವಾನಂದ ಸ್ವಾಮಿಯನ್ನು ಫೋಟೋ ಕಳವು ಮಾಡಿದ ಆರೋಪದಡಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಬಸವರಾಜನ್ ಫೋಟೋವನ್ನು ಕಳವು ಮಾಡುವಂತೆ ಪ್ರಚೋದನೆ ನೀಡಿದ್ದರು ಎಂಬ ಸತ್ಯ ಒಪ್ಪಿಕೊಂಡಿದ್ದರು. ಹಾಗಾಗಿ ಪೊಲೀಸರು ಬಸವರಾಜನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಮುರುಘಾ ಮಠದಲ್ಲಿ ಕಳ್ಳತನ- 47 ಫೋಟೋಗಳು ಕಳವುಬಸವರಾಜನ್ ಜೊತೆ ಮತ್ತೋರ್ವ ಆರೋಪಿ ಶ್ರೀನಿವಾಸ್ ಕೂಡ ಪೊಲೀಸರ ವಶದಲ್ಲಿದ್ದು, ಬಸವರಾಜನ್ ಪತ್ನಿ ಸೌಭಾಗ್ಯ ವಶಕ್ಕೆ ಪಡೆಯಲು ಪೊಲೀಸರ ಶೋಧ ಆರಂಭಿಸಿದ್ದಾರೆ. ಚಿತ್ರದುರ್ಗ ನಗರದಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದು, ಓಬವ್ವ ವೃತ್ತ ಸೇರಿ ಹಲವೆಡೆ ಬಿಗಿ ಬಂದೋಬಸ್ತ್ ಮಾಡಿದ್ದಾರೆ. 11ಗಂಟೆ ವೇಳೆಗೆ ಬಸವರಾಜನ್ ಕೋರ್ಟಿಗೆ ಹಾಜರುಪಡಿಸುವ ಸಾಧ್ಯತೆ ಇದೆ.
Sign in to your account
Username or Email Address


Password

 Remember Me


