ವಿಜಯಪುರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ವಿಜಯಪುರ (Vijayapura) ಜಿಲ್ಲೆಯ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ನೇಕಾರ ಕಾಲೋನಿಯ ಕೀರ್ತನಾ ಮಧುಕರ(21)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಬಿಎಲ್‍ಡಿಇ ನರ್ಸಿಂಗ್ ಕಾಲೇಜ್‍ನಲ್ಲಿ ಎರಡನೇ ವರ್ಷದ ನರ್ಸಿಂಗ್ ನಲ್ಲಿ ಓದುತ್ತಿದ್ದಳು. ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷೆಯಷ್ಟು ಅಂಕಗಳು ಬಂದಿರಲಿಲ್ಲ.  ಇದನ್ನೂ ಓದಿ: ಕೊಯಮತ್ತೂರು ಕಾರು ಸ್ಫೋಟ ಪ್ರಕರಣ – 45ಕ್ಕೂ ಹೆಚ್ಚು ಕಡೆ NIA ದಾಳಿಈ ವಿಚಾರದಿಂದ ಮನನೊಂದಿದ್ದ ಕೀರ್ತನಾ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: CRPF ನನ್ನ ಮೇಲೆ ಜೈಲಿನಲ್ಲಿ ಹಲ್ಲೆ ನಡೆಸಿದೆ – ಸುಕೇಶ್ ಚಂದ್ರಶೇಖರ್ ಆರೋಪ
Sign in to your account
Username or Email Address


Password

 Remember Me


