ಚಿತ್ರದುರ್ಗ: ನಾಯಿ (Dog) ಅಡ್ಡ ಬಂದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು (Car) ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ತಾಲೂಕು ಚಿಕ್ಕಬೆನ್ನೂರು ಬಳಿ ನಡೆದಿದೆ.ಮಹಾರಾಷ್ಟ್ರ ಮೂಲದ ಮಾನ್ಸಿ (40) ಹಾಗೂ ಉಜ್ವಲ್ ಬಾರ್ವಿ (44) ಮೃತ ದುರ್ದೈವಿಗಳು. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಮದ್ಯನಾದ್ರೂ ಸೇವಿಸಿ, ಗುಟ್ಕಾ ಬೇಕಾದ್ರೂ ತಿನ್ನಿ – ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆತಿರುಪತಿ (tirupati) ದರ್ಶನ ಮುಗಿಸಿ ವಾಪಸ್ ಮಹಾರಾಷ್ಟ್ರ (Maharastra) ಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಗಾಯಾಳು ಸಚ್ಚಿನ್ ಬಾರ್ವಿ ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Sign in to your account
Username or Email Address


Password

 Remember Me


