ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನಲ್ಲಿ ಇತ್ತೀಚಿಗೆ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ ಘಟನೆ ಜನರನ್ನು ಬೆಚ್ಚಿಬಿಳಿಸಿದೆ.ತಾಲೂಕಿನ ಅಣ್ಣೂರು ಗ್ರಾಮದಲ್ಲಿ 70 ವರ್ವದ ವೃದ್ಧೆಯ (Old Woman) ಮೇಲೆ 28 ವರ್ಷದ ಯುವಕನಿಂದ (Young Man) ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಕಳೆದ ಕೆಲ ವರ್ಷಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವ ವೃದ್ಧೆ ತನ್ನ ಮೊಮ್ಮಗಳ ಮನೆಯಲ್ಲಿ ವಾಸವಾಗಿದ್ದಾಗ, ಆಳಂದ ತಾಲೂಕಿನ ಗ್ರಾಮವೊಂದರ ಸಂತೋಷ್ ಎಂಬ ಯುವಕ ಅತ್ಯಾಚಾರ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.ಭಾನುವಾರ ಮಧ್ಯಾಹ್ನ ವೃದ್ಧೆಯ ಮೊಮ್ಮೊಗಳು ಬಾಗಿಲು ಮುಚ್ಚಿಕೊಂಡು ಹೊರಹೋಗಿದ್ದಳು. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಸಂತೋಷ್‌ ಮನೆಗೆ ಬಂದು ವೃದ್ಧೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇದನ್ನೂ ಓದಿ:  ಸಿನಿಮಾ ಚಿತ್ರೀಕರಣದ ವೇಳೆ ಹೆಜ್ಜೇನು ದಾಳಿ – ಇಬ್ಬರು ಗಂಭೀರಘಟನೆಯಲ್ಲಿ ತೀವ್ರ ಅಸ್ತವ್ಯಸ್ತವಾಗಿದ್ದ ವೃದ್ಧೆಯನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸಂತೋಷ್‌ನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅಲೆಮಾರಿ ರಾಜಕಾರಣಿ, ರಾಜ್ಯದಲ್ಲಿ ಎಲ್ಲಿಯೇ ಸ್ಪರ್ಧಿಸಿದರೂ ಸೋಲುತ್ತಾರೆ : ಈಶ್ವರಪ್ಪ
Sign in to your account
Username or Email Address


Password

 Remember Me


