ಹುಬ್ಬಳ್ಳಿ: ತನ್ನ ತಂದೆಗೆ ಬೈದ ಅನ್ನೋ ಕಾರಣಕ್ಕೆ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹಳೆ ಹುಬ್ಬಳ್ಳಿ (Hubballi) ಯ ಅರವಿಂದ ನಗರದದಲ್ಲಿ ಬುಧವಾರ ತಡ ರಾತ್ರಿ ಈ ಘಟನೆ ನಡೆದಿದೆ. ಶಿವರಾಜ್ ಹೊಸಮನಿ ಎಂಬವರು ಹಲ್ಲೆಗೆ ಒಳಗಾದ ವ್ಯಕ್ತಿ. ಬಾಷಾ ಹಾಗೂ ಆತನ ಸ್ನೇಹಿತರು ಶಿವರಾಜ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.ಹಲ್ಲೆಗೊಳಗಾದ ಶಿವರಾಜ್ ಬಾಷಾ ತಂದೆ (Father) ಯನ್ನು ಬೈದಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡ ಬಾಷಾ ತನ್ನ ಸ್ನೇಹಿತರ ಜೊತೆ ಸೇರಿ ಶಿವರಾಜ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ಶಿವಸೇನೆ ಮುಖಂಡ ಗುಂಡಿನ ದಾಳಿಗೆ ಬಲಿಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಕಿಮ್ಸ್ (KIIMS) ನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಸದ್ಯ ಹಳೆ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Sign in to your account
Username or Email Address


Password

 Remember Me


