ಕಲಬುರಗಿ: ಪಿಎಸ್‌ಐ (PSI) ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು (Accused) ಸಿಐಡಿ (CID) ತಂಡ ಬಂಧಿಸಿದೆ.ಸುಪ್ರಿಯಾ ಹುಂಡೆಕರ್ (26) (Supriya Hundekar) ಬಂಧಿತ ಆರೋಪಿಯಾಗಿದ್ದು, ಕಲ್ಯಾಣ ಕರ್ನಾಟಕ ಮಹಿಳಾ ಖೋಟಾದಲ್ಲಿ ಸುಪ್ರೀಯಾ ಮೊದಲ ಸ್ಥಾನ ಪಡೆದಿದ್ದಳು. ಇದನ್ನೂ ಓದಿ: ಅಶ್ಲೀಲ ದೃಶ್ಯ ನೋಡಿ ಪ್ರಚೋದನೆ – ಅಪ್ರಾಪ್ತನಿಂದ ಬಾಲಕಿಯ ಮೇಲೆ ರೇಪ್‌, ಕೊಲೆಕಿಂಗ್ ಪಿನ್ ಆರ್.ಡಿ.ಪಾಟೀಲ್ ಮೂಲಕ ಪರೀಕ್ಷೆಯಲ್ಲಿ ಸುಪ್ರಿಯಾ ಅಕ್ರಮ ನಡೆಸಿದ್ದಳು. ಕಲಬುರಗಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಬ್ಲೂಟೂತ್ ಬಳಸಿ, ಪರೀಕ್ಷೆಯಲ್ಲಿ (Exams) ಅಕ್ರಮ ನಡೆಸಿದ್ದಳು ಎಂದು ಸಿಐಡಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: 2025ರಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ – ಸಮಾವೇಶದಲ್ಲಿ ಹೂಡಿಕೆದಾರರ ಗಮನ ಸೆಳೆದ ಜೋಶಿ
ಈ ಕುರಿತು ಗುಲ್ಬರ್ಗ ಪೋಲಿಸ್ ಠಾಣೆಯಲ್ಲಿ (Gulbarga Police Station) ಸಿಐಡಿ ಪ್ರಕರಣ ದಾಖಲಿಸಿದೆ. ಈ ಮೂಲಕ ಕಲಬುರಗಿಯಲ್ಲಿ ಪಿಎಸ್‌ಐ (PSI) ಪ್ರಕರಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.
Sign in to your account
Username or Email Address


Password

 Remember Me


