ಬೀದರ್: ಕೌಟುಂಬಿಕ ಕಲಹ ಹಿನ್ನೆಲೆ ರಸ್ತೆಯಲ್ಲಿ ಹಾಕಿದ್ದ ಪತಿ ಹಾಗೂ ಬಿಜೆಪಿ (BJP) ಮುಖಂಡ ಮಲ್ಲೇಶ್ ಬ್ಯಾನರ್ (Banner) ಹರಿದು ಹಾಕಿ ಪತ್ನಿ ರಂಪಾಟ ಮಾಡಿದ ಘಟನೆ ಬೀದರ್ (Bidar) ನಗರದ ಮೈಲೂರು ಕ್ರಾಸ್ ಬಳಿ ನಡೆದಿದೆ.ಮಲ್ಲೇಶ್ ಜನ್ಮದಿನ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಿಎಂ ಸೇರಿದಂತೆ ಸಚಿವರು ಹಾಗೂ ಬಿಜೆಪಿ ಮುಖಂಡರ ಜೊತೆ ಬ್ಯಾನರ್ ಹಾಕಲಾಗಿತ್ತು. ಆದರೆ ಮಲ್ಲೇಶ್ ಪತ್ನಿ ಸಾಧನಾ ಈ ಬ್ಯಾನರ್ ಹರಿದು ಹಾಕುವ ಮೂಲಕ ರಂಪಾಟ ನಡೆಸಿದ್ದಾರೆ. ಇದನ್ನೂ ಓದಿ: ತಾಯಿಯಿಂದ ಬೇರ್ಪಟ್ಟ ಮಗುವಿಗೆ ಎದೆಹಾಲು ಉಣಿಸಿದ ಮಹಿಳಾ ಪೇದೆ – ಭಾರೀ ಪ್ರಶಂಸೆಕಳೆದ ನಾಲ್ಕು ತಿಂಗಳ ಹಿಂದೆ ಪತಿಯ ಅನೈತಿಕ ಸಂಬಂಧದ ಬಗ್ಗೆ ಠಾಣೆಗೆ ದೂರು ನೀಡಿದ್ರು. ಪೊಲೀಸರು ಎಫ್‍ಐಆರ್ (FIR) ದಾಖಲಿಸದ ಕಾರಣ ಇಂದು ಸಾವಿರ ಮೀಟರ್ ಉದ್ದದ ಕನ್ನಡ ಬಾವುಟ ಮೆರವಣಿಗೆ ವೇಳೆ ಪತಿಯ ಬ್ಯಾನರ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಮಹಿಳೆಯ ನಡುವೆ ಮಾತಿನ ಚಕಮಕಿಯಾಗಿದ್ದು, ಮಹಿಳೆಯ ಸಮಾಧಾನ ಪಡಿಸಲು ಪೊಲೀಸರು ಹರಸಾಹಸ ಪಟ್ಟರು.ಬಿಜೆಪಿ ಮುಖಂಡ ಸೂರ್ಯಕಾಂತ್ ನಾಗಮಾರಪ್ಪಳ್ಳಿ ಹಾಗೂ ಶಿವಶರಣಪ್ಪ ವಾಲಿ ಮುಂದೆ ನ್ಯಾಯಕ್ಕಾಗಿ ಮಹಿಳೆ ಕಣ್ಣೀರು ಹಾಕಿದ ಪ್ರಸಂಗವು ಈ ವೇಳೆ ನಡೆಯಿತು.
Sign in to your account
Username or Email Address


Password

 Remember Me


