ಬೆಂಗಳೂರು: ಶಾಸಕ ಸುರೇಶ್ ಕುಮಾರ್ (Suresh Kumar) ಅವರ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ (Fake Facebook) ಖಾತೆ ತೆರದು ಹಣ ನೀಡುವಂತೆ ಕೇಳಿದ್ದಾರೆ.ಈ ಸಂಬಂಧ ಸ್ವತಃ ಸಚಿವರೇ ತನ್ನ ಫೇಸ್‍ಬುಕ್ ಖಾತೆಯಲ್ಲಿ ಸ್ಕ್ರೀನ್ ಶಾಟ್ ಹಾಕಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ನಕಲಿ ಫೇಸ್ ಬುಕ್ ಅಕೌಂಟ್ ತೆಗೆದಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈ ಕುರಿತು ಸೈಬರ್ ಪೊಲೀಸ್ ವಿಭಾಗಕ್ಕೆ ದೂರು ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.ದಯವಿಟ್ಟು ನನ್ನ ಹೆಸರಿನಲ್ಲಿ ಯಾರಾದರೂ ಹಣ ಕೇಳಿದರೆ ತಾವ್ಯಾರೂ ಸ್ಪಂದಿಸಬಾರದೆಂದು ಮನವಿ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳ ವಿರುದ್ಧ ಸಚಿವ ಶ್ರೀರಾಮುಲು ಪ್ರತಿಭಟನೆ
Sign in to your account
Username or Email Address


Password

 Remember Me


