ಬೆಂಗಳೂರು: ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ (Flood Situation) ಎದುರಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಹಾಗೂ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಖಡಕ್‌ ಸೂಚನೆ ನೀಡಿದ್ದಾರೆ.ಜಲಾಶಯಗಳ ನೀರಿನ ಮಟ್ಟದ (Dam Water Level) ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: 4 ವರ್ಷಗಳ ಬಳಿಕ ಧಾರವಾಡದ ಇಂದಿರಮ್ಮನ ಕೆರೆ ಭರ್ತಿ – 1,500 ಕ್ಯುಸೆಕ್ ನೀರು ಹೊರಕ್ಕೆಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಈ ಕುರಿತು ಸಹ ಜಿಲ್ಲಾಧಿಕಾರಿಗಳು ಎಚ್ಚರವಹಿಸುವಂತೆ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ:  4 ಮಕ್ಕಳ ತಾಯಿಯನ್ನ ಮದ್ವೆಯಾಗಿ ಇಸ್ಲಾಂಗೆ ಮತಾಂತರವಾಗುವಂತೆ ಚಿತ್ರಹಿಂಸೆ; ಪತಿ ಅರೆಸ್ಟ್‌ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಲಭ್ಯರಿದ್ದು ಎಚ್ಚರ ವಹಿಸುವಂತೆ ತಾಕೀತು ಮಾಡಿದ್ದಾರೆ.ಚಾಮರಾಜ ನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆಗಳು:
08226-223163
08226-223161
08226-223160
ವಾಟ್ಸಾಪ್‌ ಸಂಖ್ಯೆ: 9740942901Sign in to your account
Username or Email Address


Password

 Remember Me


