ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ (Karnataka Cabinet Reshuffle) ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್ (Congress High Command) ತೀರ್ಮಾನ ಮಾಡುತ್ತದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ (Salim Ahmed) ತಿಳಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ, ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನರ್ ರಚನೆ ಇಲ್ಲ. 3-4 ರಾಜ್ಯಗಳ ಚುನಾವಣೆ ಇದೆ. ಹೀಗಾಗಿ ಸಂಪುಟ ಪುನರ್ ರಚನೆ ಬಗ್ಗೆ ಮಾಹಿತಿ ಇಲ್ಲ. ಸದ್ಯಕ್ಕಂತೂ ಸಂಪುಟ ವಿಸ್ತರಣೆ ಇಲ್ಲ. ಆದರೂ ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಅವರು ಹೇಳಿದ್ದಾರೆ.ಎಷ್ಟು ದಿನ ನಾನು ಸಚಿವನಾಗಿ ಇರುತ್ತೇನೋ ಎಂಬ ಸಚಿವ ಜಮೀರ್ ಹೇಳಿಕೆ ವಿಚಾರವಾಗಿ, ಜಮೀರ್ ಅಹಮದ್ ಹೇಳಿಕೆ ನನಗೆ ಗೊತ್ತಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.ಇದೇ ವೇಳೆ ಪತ್ರಕರ್ತರು ನೀವು ಸಚಿವ ಸ್ಥಾನದ ಆಕಾಂಕ್ಷಿಯೇ? ಎಂದು ಪ್ರಶ್ನಿಸಿದರು. ಇದಕ್ಕೆ, ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ ಎಂದು ಜಾರಿಕೊಂಡರು.Sign in to your account
Username or Email Address


Password

 Remember Me


