ಬೆಂಗಳೂರು: ರಾಮನಗರ (Ramanagara) ಜಿಲ್ಲೆ ಹೆಸರನ್ನ ಮರು ಸ್ಥಾಪನೆ ಮಾಡೇ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಜೆಡಿಎಸ್ ಯುವ ಘಟದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮರು ಸವಾಲು ಎಸೆದಿದ್ದಾರೆ.ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ಹೆಸರು ಬದಲಾವಣೆ ಮಾಡಲು ಕುಮಾರಸ್ವಾಮಿ ಹಣೆಯಲ್ಲೂ ಬರೆದಿಲ್ಲ ಎಂಬ ಡಿಕೆ ಶಿವಕುಮಾರ್‌ಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಹಣೆಬರಹ ಬರೆಯೋದು ಭಗವಂತ ಮತ್ತು ಏಳೂವರೆ ಕೋಟಿ ಜನತೆ. ರಾಜ್ಯದ ಜನತೆ ಕುಮಾರಸ್ವಾಮಿ ಹಣೆಬರಹ ಬರೆಯುತ್ತಾರೆ. ಕಾದು ನೋಡೊಣ ಭಗವಂತ ಯಾರ್ ಯಾರ್ ಹಣೆಬರಹ ಏನು ಬರೆಯುತ್ತಾನೆ. ಈಗಾಗಲೇ ಏನೇನು ಬರೆದಿದ್ದಾನೆ ಅಂತ ಮುಂದೆ ಹೋಗ್ತಾ ಹೋಗ್ತಾ ಗೊತ್ತಾಗುತ್ತದೆ ಎಂದು ಹೇಳಿದರು.ನಾವು ಯಾವತ್ತು ಡಿಕೆ ಶಿವಕುಮಾರ್ ಅವರನ್ನ ನೆನಪು ಮಾಡಿಕೊಳ್ಳೊಲ್ಲ. ಆದರೆ ಡಿಕೆ ಶಿವಕುಮಾರ್ ಹಾಗೆ ಹೇಳ್ತಾರೆ. ನೆನಪು ಮಾಡಿಕೊಂಡರೂ ನಾವು ಅವರಿಗೆ ಒಳ್ಳೆಯದಾಗಲಿ ಅಂತ ಹೇಳುತ್ತೇವೆ. ರಾಜಕೀಯವಾಗಿ ಅವರು ತೆಗೆದುಕೊಳ್ತಿರೋ ನಡೆಗಳು ಸರಿಯಲ್ಲ ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ಮನೆಗೆ ರಾಜಿ ಸಂಧಾನಕ್ಕೆ ಹೋಗಿದ್ದಲ್ಲ ಎಂದ ವಿನೋದ್ ರಾಜ್ ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಹೆಸರು ಬದಲಾವಣೆ ಮಾಡಿದರೆ ಅನೇಕ ತಾಂತ್ರಿಕ ಸಮಸ್ಯೆ ಆಗಲಿವೆ. ರೆವಿನ್ಯೂ ರೆಕಾರ್ಡ್, ಸರ್ಕಾರದ ದಾಖಲೆಗಳು 5 ತಾಲೂಕುಗಳಲ್ಲಿ ಬದಲಾವಣೆ ಆಗಬೇಕು.ಪ್ರತಿನಿತ್ಯ ಜನ ತಾಲೂಕು ಕಚೇರಿಗೆ ಓಡಾಬೇಕು. ಓಟರ್ ಐಡಿ, ಗ್ಯಾಸ್ ಬಿಲ್ ಅಡ್ರೆಸ್ ಇರಬಹುದು. ಇವೆಲ್ಲ ಸಮಸ್ಯೆಗಳಾಗುತ್ತವೆ. ಅಷ್ಟು ಸುಲಭವಾಗಿ ಹೆಸರು ಬದಲಾವಣೆ ಮಾಡೋದು ಸಾಧ್ಯವಿಲ್ಲ ಅಂತ ತಿಳಿಸಿದರು. ಇದನ್ನೂ ಓದಿ: ದರ್ವೇಶ್ ಗ್ರೂಪ್‌ನಿಂದ ವಂಚನೆ – ಸಿಐಡಿ ದಾಳಿ ವೇಳೆ ಕೋಟ್ಯಂತರ ರೂ. ಪತ್ತೆ2006 ರಲ್ಲಿ ಕುಮಾರಸ್ವಾಮಿ ಚಿಕ್ಕಬಳ್ಳಾಪುರ, ರಾಮನಗರ ಅಂತ ಜಿಲ್ಲೆ ಮಾಡಿದ್ರು. ಅವತ್ತು ಯಾರೂ ವಿರೋಧ ಮಾಡದೇ ಎಲ್ಲರೂ ಸಹಮತ ವ್ಯಕ್ತಪಡಿಸಿದರು.ಇವತ್ತು ಈ ರಾಮನ (Rama) ಹೆಸರು ಅಳಿಸುವ ಪ್ರಯತ್ನವನ್ನ ಕಾಂಗ್ರೆಸ್ ಸರ್ಕಾರ ಮಾಡ್ತಿದೆ. ಇವರನ್ನು ಅ ರಾಮನೇ ನೋಡಿಕೊಳ್ತಾನೆ. ಮುಂದಿನ ದಿನಗಳಲ್ಲಿ ರಾಮನಗರದ ಇತಿಹಾಸ, ರಾಮನ ಇತಿಹಾಸ ಯಾರಿಗೂ ಅಳಿಸುವ ಶಕ್ತಿ ಇಲ್ಲ ಎಂದು ತಿರುಗೇಟು ನೀಡಿದರು.ಕಾಂಗ್ರೆಸ್ ಸರ್ಕಾರ ಇವತ್ತು ಏನು ಬೇಕಾದರೂ ತೀರ್ಮಾನ ತೆಗೆದುಕೊಳ್ಳಲಿ. ಸರ್ಕಾರ ಅವರ ಕೈಯಲ್ಲಿ ಇದ್ದು ಆಡಳಿತ ನಡೆಸುತ್ತಿದ್ದಾರೆ. ಮುಂದಿ‌ನ ದಿನಗಳಲ್ಲಿ ಭಗವಂತ, ರಾಜ್ಯದ ಜನತೆ ಕುಮಾರಸ್ವಾಮಿಗೆ ಶಕ್ತಿ ಕೊಡ್ತಾರೆ. ಆಗ ಮತ್ತೊಮ್ಮೆ ರಾಮನಗರ ಜಿಲ್ಲೆ ಹೆಸರು ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್‌ಗೆ ಸವಾಲ್ ಹಾಕಿದರು. Sign in to your account
Username or Email Address


Password

 Remember Me


