ಬೆಂಗಳೂರು: ಗಾಂಧಿ ಜಯಂತಿಯಂದು (Gandhi Jayanti) ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಪೌರ ಕಾರ್ಮಿಕರೊಂದಿಗೆ ಕಸ ಗುಡಿಸಿದ್ದಾರೆ.ಇಂದು ಬೆಳಗ್ಗೆ ಕುಮಾರಸ್ವಾಮಿ ಅವರು ಬೆಂಗಳೂರಿನ ಹೆಚ್‌ಎಂಟಿ ಕ್ಯಾಂಪಸ್‌ನಲ್ಲಿರುವ (HMT Campus) ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಯ ಸೆಂಟರ್ ಫಾರ್ ಎಕ್ಸಲೆನ್ಸಿಗೆ ಭೇಟಿ ನೀಡಿದರು. ಅಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. ಬಳಿಕ ಸ್ವಚ್ಛ ಭಾರತ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದನ್ನೂ ಓದಿ: ಸತತ ಪ್ರಯತ್ನದಿಂದ ಮಾತ್ರ ಭಾರತವನ್ನು ಸ್ವಚ್ಛಗೊಳಿಸಲು ಸಾಧ್ಯ: ಮೋದಿ ಹೆಚ್‌ಎಂಟಿ ಅಧ್ಯಕ್ಷ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ, ಇತರೆ ಉನ್ನತ ಅಧಿಕಾರಿಗಳು ಹಾಗೂ ಎಕ್ಸಲೆನ್ಸಿ ಕೇಂದ್ರದ ಅನೇಕ ವಿಜ್ಞಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಸ್ವಚ್ಚ ಭಾರತ ದಿವಸ ಕಾರ್ಯಕ್ರಮದಲ್ಲಿ ತಮ್ಮೊಂದಿಗೆ ಭಾಗವಹಿಸಿದ್ದ ಪೌರ ಕಾರ್ಮಿಕರ ಯೋಗ ಕ್ಷೇಮವನ್ನು ಕೇಂದ್ರ ಸಚಿವರು ವಿಚಾರಿಸಿದರು. ಅಲ್ಲದೆ, ಅವರಿಗೆ ಸ್ವಚ್ಚತಾ ದಿವಸದ ಪ್ರಮಾಣ ಪತ್ರಗಳನ್ನು ವಿತರಿಸಿದರು. Sign in to your account
Username or Email Address


Password

 Remember Me


