== ಕ್ಷಿಪಣಿ == ಕ್ಷಿಪಣಿ : ಯಾವುದೇ ರೀತಿಯಲ್ಲಿ) ಚಿಮ್ಮಿದ ವಸ್ತು ಯಾ ಚಿಮ್ಮಿದ ಅಸ್ತ್ರ ಭಾರತದ ಕ್ಷಿಪಣಿಗಳು: == ಅಗ್ನಿ- ೫ ರ ಉಡಾವಣೆ == ಒಡಿಶಾದ ಬಾಲಸೋರ್‌ನಿಂದ ಉಡಾಯಿಸಿದ ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಅತ್ಯಂತ ಶಕ್ತಿಶಾಲಿ ಖಂಡಾಂತರ ಕ್ಷಿಪಣಿ ‘ಅಗ್ನಿ–5’ರ ಪರೀಕ್ಷೆ ಯಶಸ್ವಿಯಾಗಿದೆ. ಅದು ಚೀನಾ ಸೇರಿದಂತೆ ಏಷ್ಯಾ ಖಂಡದಲ್ಲಿರುವ ಎಲ್ಲ ಗುರಿಗಳ ಮೇಲೆ ದಾಳಿ ಮಾಡುವ ಸಾಮರ್ಥ್ಯ ಹೊಂದಿದೆ. ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿರುವ, 5 ಸಾವಿರ ಕಿ.ಮೀ ವ್ಯಾಪ್ತಿಯಲ್ಲಿ ದಾಳಿ ಮಾಡುವ ಸಾಮರ್ಥ್ಯ ಹೊಂದಿರುವ ಈ ಕ್ಷಿಪಣಿಯ ಪರೀಕ್ಷೆಯನ್ನು ಒಡಿಶಾ ಕರಾವಳಿಯಲ್ಲಿರುವ ಅಬ್ದುಲ್‌ ಕಲಾಂ ದ್ವೀಪದಲ್ಲಿ ಸೋಮವಾರ ಯಶಸ್ವಿಯಾಗಿ ನಡೆಸಲಾಯಿತು. ‘ಅಗ್ನಿ–5’ರ ಯಶಸ್ವಿ ಪರೀಕ್ಷೆಯಿಂದ ಭಾರತದ ರಕ್ಷಣಾ ವ್ಯವಸ್ಥೆಗೆ ಇನ್ನಷ್ಟು ಬಲ ಬಂದಂತಾಗಿದೆ. == ಅಗ್ನಿ ೫ ರ ಸಾಮಾನ್ಯ ವಿವರ == ಖಂಡಾಂತರ ಕ್ಷಿಪಣಿ : ಹಿಂದೆ ಮೂರು ಬಾರಿ ಪರೀಕ್ಷೆ ನಡೆದಿತ್ತು :2012; 2013; ಮತ್ತು 2015 ಜನವರಿ 31. == ಮೂರು ಹಂತಗಳ ಎಂಜಿನ್‌ == ಮೂರು ಹಂತಗಳ ಎಂಜಿನ್‌ ಹೊಂದಿರುವ, ನೆಲದಿಂದ ನೆಲಕ್ಕೆ ಚಿಮ್ಮುವ ಕ್ಷಿಪಣಿಯನ್ನು ೨೬-೧೨-೨೦೧೬ ಸೋಮವಾರ ಬೆಳಿಗ್ಗೆ 11.05ರ ಸುಮಾರಿಗೆ ಇಂಟಗ್ರೇಟೆಡ್ ಟೆಸ್ಟ್‌ ರೇಂಜ್‌ನಲ್ಲಿ (ಐಟಿಆರ್‌) ಸಂಚಾರಿ ಉಡಾವಣಾ ವಾಹನದಿಂದ (ಮೊಬೈಲ್‌ ಲಾಂಚರ್‌) ಉಡಾವಣೆ ಮಾಡಲಾಯಿತು. ಉಡಾವಣಾ ವಾಹನದಲ್ಲಿ ಅಳವಡಿಸಲಾಗಿದ್ದ ಮುಚ್ಚಿದ ಕೊಳವೆಯ (ಕ್ಯಾನಿಸ್ಟರ್‌) ಮೂಲಕ ಕ್ಷಿಪಣಿಯನ್ನು ಉಡಾಯಿಸಲಾಯಿತು. ನಭಕ್ಕೆ ಚಿಮ್ಮಿದ ಕ್ಷಿಪಣಿಯು ನಿಗದಿ ಪಡಿಸಲಾಗಿದ್ದ ಎಲ್ಲ ಗುರಿಗಳನ್ನು ಯಾವುದೇ ಅಡೆ ತಡೆಗಳಿಲ್ಲದೆ ತಲುಪಿದೆ. ಇದು ಏಷ್ಯಾ, ಯುರೋಪ್ ಖಂಡಗಳ ಎಲ್ಲ ಗುರಿ ತಲುಪುವ ಸಾಮರ್ಥ್ಯ ಹೊಂದಿದೆ. == ವಾಹಕದಿಂದ ದಾಳಿ ನಡೆಸಬಹುದು == ‘ಅಗ್ನಿ–5’ರ ಅಭಿವೃದ್ಧಿ ಹಂತದಲ್ಲಿ ನಡೆಸಲಾದ ನಾಲ್ಕನೇ ಪರೀಕ್ಷೆ ಇದು. ಕೊಳವೆಯ ಮೂಲಕ ನಡೆಸಿದ ಎರಡನೇ ಪರೀಕ್ಷೆ (ಉಡಾವಣಾ ವಾಹನದಲ್ಲಿ ಅಳವಡಿಸಲಾಗಿರುವ ಸಿಲಿಂಡರ್ ಆಕಾರದ ದೊಡ್ಡ ಕೊಳವೆಯಲ್ಲಿ ಕ್ಷಿಪಣಿ ಇಡಲಾಗುತ್ತದೆ. ಈ ವ್ಯವಸ್ಥೆಯಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಕ್ಷಿಪಣಿ ಉಡಾವಣೆಗೆ ಸಿದ್ಧತೆ ನಡೆಸಬಹುದು. ಕ್ಷಿಪಣಿ ಹೊತ್ತೊಯ್ಯುವ ವಾಹನ ಹೋಗುವ ಸ್ಥಳಗಳಿಂದಲೇ ಕ್ಷಿಪಣಿ ದಾಳಿ ನಡೆಸಬಹುದು). == ಅತ್ಯಾಧುನಿಕ ತಂತ್ರಜ್ಞಾನ == ಅಗ್ನಿ ಸರಣಿಯ ಕ್ಷಿಪಣಿಗಳಲ್ಲೇ ‘ಅಗ್ನಿ–5’ ಅತ್ಯಂತ ಅತ್ಯಾಧುನಿಕವಾದುದು. ಪಥದರ್ಶಕ, ಪಥ ನಿರ್ದೇಶನ ವ್ಯವಸ್ಥೆ, ಸಿಡಿತಲೆ ಮತ್ತು ಎಂಜಿನ್‌ ಅಭಿವೃದ್ಧಿಯಲ್ಲಿ ಹೊಸ ತಂತ್ರಜ್ಞಾನಗಳನ್ನು ಬಳಸಲಾಗಿದೆ. ಕ್ಷಿಪಣಿ ಪರೀಕ್ಷೆಯ ಸಂದರ್ಭದಲ್ಲಿ ದೇಶಿಯವಾಗಿ ಅಭಿವೃದ್ಧಿ ಪಡಿಸಿರುವ ಹಲವು ತಂತ್ರಜ್ಞಾನಗಳನ್ನೂ ಪರೀಕ್ಷಿಸಲಾಗಿದೆ. ಅತ್ಯಂತ ಹೆಚ್ಚು ನಿಖರವಾಗಿ ಗುರಿಯನ್ನು ತೋರಿಸುವ ರಿಂಗ್‌ ಲೇಸರ್‌ ಜೈರೊ ಬೇಸ್ಡ್‌ ಇನರ್ಷಿಯಲ್‌ ನೇವಿಗೇಷನ್‌ ಸಿಸ್ಟಮ್‌ (ಆರ್‌ಐಎನ್‌ಎಸ್) ಮತ್ತು ಅತ್ಯಾಧುನಿಕವಾದ ಸೂಕ್ಷ್ಮ ಪಥದರ್ಶಕ ವ್ಯವಸ್ಥೆಗಳನ್ನು (ಎಂಐಎಸ್‌ಎಸ್‌) ಕ್ಷಿಪಣಿಯಲ್ಲಿ ಅಳವಡಿಸಲಾಗಿದ್ದು, ಕ್ಷಿಪಣಿಯು ನಿಖರವಾಗಿ ಗುರಿ ತಲುಪಿಸುಯಲ್ಲಿ ಇವು ನೆರವಾಗಿವೆ. ಕ್ಷಿಪಣಿಯಲ್ಲಿದ್ದ ಅತಿ ವೇಗದ ಕಂಪ್ಯೂಟರ್‌ ಮತ್ತು ದೋಷಗಳನ್ನು ಸರಿಪಡಿಸಬಲ್ಲ ತಂತ್ರಾಶವು ಕ್ಷಿಪಣಿಯನ್ನು ನಿರ್ದಿಷ್ಟ ಗುರಿಯೆಡೆಗೆ ಸಾಗಿಸಿದೆ. == ಬೆಳಗಾವಿಯ ‘ಆಕ್ಚುಯೇಟರ್ == ದಿ.೨೬-೧೨-೨೦೧೬ ಸೋಮವಾರ ಪರೀಕ್ಷಾರ್ಥ ಉಡಾವಣೆಯಾದ ಭಾರತದ ಅತ್ಯಂತ ಶಕ್ತಿಶಾಲಿ ಖಂಡಾಂತರ ಕ್ಷಿಪಣಿ ‘ಅಗ್ನಿ–5’ರಲ್ಲಿ ಬೆಳಗಾವಿಯ ಸರ್ವೋ ಕಂಟ್ರೋಲ್ಸ್‌ ಅಂಡ್‌ ಹೈಡ್ರಾಲಿಕ್ ಇಂಡಿಯಾ ಕಂಪೆನಿಯು ಸಿದ್ಧಪಡಿಸಿದ ಸಾಧನವಾದ ‘ಆಕ್ಚುಯೇಟರ್‌’ಗಳನ್ನು ಪೂರೈಸಲಾಗಿದೆ. (ಕಂಪೆನಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ದೀಪಕ ದಡೋತಿ ಹೇಳಿಕೆ) == ಅಗ್ನಿ–6 == ಜಲಾಂತ ರ್ಗಾಮಿ ನೌಕೆ ಮತ್ತು ಭೂಮಿಯಿಂದಲೂ ಇದನ್ನು ಉಡಾವಣೆ ಮಾಡಬಹುದಾಗಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮುಂದಿನ ದಿನಗಳಲ್ಲಿ 8 ಸಾವಿರದಿಂದ 10 ಸಾವಿರ ಕಿ.ಮೀ.ವರೆಗೆ ಕ್ರಮಿಸುವ ಸಾಮರ್ಥ್ಯ ಇರುವ ‘ಅಗ್ನಿ– 6’ ಕ್ಷಿಪಣಿ ಅಭಿವೃದ್ಧಿಪಡಿಸಲು ಮುಂದಡಿ ಇಟ್ಟಿದೆ. ಇದರ ಜತೆಯಲ್ಲೇ ರಷ್ಯಾ ಸಹಭಾಗಿತ್ವದಿಂದ ಅಭಿವೃದ್ಧಿಪಡಿಸಿರುವ ಬ್ರಹ್ಮೋಸ್‌ ಕ್ಷಿಪಣಿ ಮತ್ತಷ್ಟು ಆಧುನಿಕ ಆಗುತ್ತಿದೆ. ಸೂಪರ್‌ಸಾನಿಕ್‌ ವೇಗದ ಬ್ರಹ್ಮೋಸ್‌–2 ಕ್ಷಿಪಣಿಯು ಮತ್ತಷ್ಟು ವೇಗ ಪಡೆದುಕೊಳ್ಳಲಿದೆ. ಇದೇ ಕ್ಷಿಪಣಿಯ ಸಣ್ಣ ಮಾದರಿಯನ್ನು ಸಹ ಸಿದ್ಧಪಡಿಸುವ ಯೋಜನೆ ಇದೆ. == ಅಗ್ನಿ ಕ್ಷಿಪಣಿಗಳ ದಾಳಿ ವ್ಯಾಪ್ತಿ == == ಉಲ್ಲೇಖಗಳು == == ನೋಡಿ == 5000 ಕಿ.ಮೀ. ದೂರ ಕ್ರಮಿಸುವ ಸಾಮರ್ಥ್ಯ;ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ–5 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ ; 3 , 2018 ಸಾಗರಿಕ ಕ್ಷಿಪಣಿ ನಾಗೇಶ್ ಹೆಗಡೆ;ಗಡಿಯೊಳಗಿನ ವೈರಿಯತ್ತ ಅಕ್ಷೋಹಿಣಿ ಕ್ಷಿಪಣಿ;29 , 2016 2016-12-29 ವೇಬ್ಯಾಕ್ ಮೆಷಿನ್ ನಲ್ಲಿ. [*'ಅಗ್ನಿ ಪುತ್ರಿ' ಟೆಸ್ಸಿ : ಡಿಆರ್‌ಡಿಒ ವೈಮಾನಿಕ ವ್ಯವಸ್ಥೆಯ ಮಹಾ ನಿರ್ದೇಶಕಿಯಾಗಿ ಟೆಸ್ಸಿ ಥಾಮಸ್ ನೇಮಕ; 29 , 2018 ಶಾಂತಿಮಂತ್ರದ ಕ್ಷಿಪಣಿಯಮ್ಮ ಟೆಸ್ಸಿ ಥಾಮಸ್;ರಘುನಾಥ ಚ.ಹ.;3 , 2018 == ಉಲ್ಲೇಖ ==